11:23 AM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಧರ್ಮಸ್ಥಳ- ಸೋಮವಾರಪೇಟೆ- ಕುಕ್ಕೆ ಸುಬ್ರಹ್ಮಣ್ಯ: ಇಂದಿನಿಂದ ಹೊಸ ಬಸ್ ಸೇವೆ

28/05/2026, 10:52

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆಸುಬ್ರಹ್ಮಣ್ಯಕ್ಕೆ ಬರುವ ಯಾತ್ರಾರ್ಥಿಗಳ ಹಾಗೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಬಿಸ್ಲೆ, ಕೂಡು ರಸ್ತೆ, ಶನಿವಾರಸಂತೆ, ಸೋಮವಾರಪೇಟೆ, ಕುಶಾಲನಗರ, ಮೈಸೂರು, ಬೆಂಗಳೂರು ಮಾರ್ಗದಲ್ಲಿ ಹೊಸ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಮೇ, 28 ರಿಂದ ಆರಂಭವಾಗಲಿದೆ. ನಿರ್ಗಮನ ಸಮಯ ಇಂತಿದೆ: ಧರ್ಮಸ್ಥಳದಿಂದ ಬೆಳಗ್ಗೆ 6.30 ಗಂಟೆಗೆ ನಿರ್ಗಮನ, ಕುಕ್ಕೆ ಸುಬ್ರಹ್ಮಣ್ಯದಿಂದ ಬೆಳಗ್ಗೆ 8 ಗಂಟೆಗೆ ನಿರ್ಗಮನ, ಬಿಸ್ಲೆ ಬೆಳಗ್ಗೆ 8.50 ಗಂಟೆಗೆ ನಿರ್ಗಮನ, ಶನಿವಾರಸಂತೆಯಿಂದ ಬೆಳಗ್ಗೆ 9.35 ಗಂಟೆಗೆ ನಿರ್ಗಮನ ಹಾಗೂ ಸೋಮವಾರಪೇಟೆಯಿಂದ ಬೆಳಗ್ಗೆ 10.30 ಗಂಟೆಗೆ ನಿರ್ಗಮನವಾಗಲಿದೆ.

ಅದೇ ಬಸ್ಸು ಬೆಂಗಳೂರು ಕೆಂಪೇಗೌಡ ಬಸ್ಸು ನಿಲ್ದಾಣದಿಂದ 9.45 ಗಂಟೆಗೆ ನಿರ್ಗಮನಗೊಂಡು ಮೈಸೂರು, ಕುಶಾಲನಗರ, ಸೋಮವಾರಪೇಟೆ, ಶನಿವಾರಸಂತೆ, ಕೂಡುರಸ್ತೆ, ಬಿಸ್ಲೆ, ಕುಕ್ಕೆಸುಬ್ರಹ್ಮಣ್ಯ ಮಾರ್ಗವಾಗಿ ಧರ್ಮಸ್ಥಳಕ್ಕೆ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಹತ್ತಿರದ ಬಸ್ಸು ನಿಲ್ದಾಣ ಅಥವಾ ಟಿಕೇಟು ಕೌಂಟರ್‍ನಿಂದ ಅಥವಾ ಆನ್‍ಲೈನ್ ಬುಕ್ಕಿಂಗ್ ಮಾಡಿಕೊಳ್ಳಬಹುದು. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪುತ್ತೂರು ವಿಭಾಗದ ಕ.ರಾ.ರ.ಸಾನಿ. ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀಹರಿಬಾಬು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು