6:40 PM Friday29 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಡಿ.ಕೆ. ಶಿವಕುಮಾರ್‌ ಗೆ ಸೋಮವಾರ ಗೋಧೂಳಿ ಮುಹೂರ್ತದಲ್ಲಿ ಪಟ್ಟಾಭಿಷೇಕ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

29/05/2026, 08:48

ಬೆಂಗಳೂರು(reporterkarnataka.com): ಕರ್ನಾಟಕದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರ, ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಲೋಕ ಭವನದಲ್ಲಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗಿಳಿಯಲು ದಾರಿ ಮಾಡಿಕೊಟ್ಟಿದ್ದಾರೆ.
ಪಕ್ಷದ ಹೈಕಮಾಂಡ್ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಸಿದ್ಧರಾಮಯ್ಯ ಖಚಿತಪಡಿಸಿದ್ದಾರೆ. ತಾವು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವುದಾಗಿ ಸ್ಪಷ್ಟಪಡಿಸಿರುವ ಅವರು, ಶಾಸಕನಾಗಿ ಇನ್ನೂ ಎರಡು ವರ್ಷಗಳ ಕಾಲಾವಧಿ ಬಾಕಿ ಇರುವುದರಿಂದ ರಾಷ್ಟ್ರೀಯ ರಾಜಕಾರಣಕ್ಕೆ (ರಾಜ್ಯಸಭೆಗೆ) ಹೋಗುವ ಆಫರ್ ಅನ್ನು ನಯವಾಗಿ ನಿರಾಕರಿಸಿದ್ದಾರೆ.
ಮೂಲಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ಸೋಮವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ. ಈ ಸಂಬಂಧದ ಅಧಿಕೃತ ಘೋಷಣೆ ಮತ್ತು ಸಿದ್ಧತೆಗಳು ಬಿರುಸಿನಿಂದ ಸಾಗಿವೆ.
ಕಳೆದ ಮೂರು ವರ್ಷಗಳ ಸಿದ್ಧರಾಮಯ್ಯ ಅವರ ಆಡಳಿತದ ನಂತರ, ಕಾಂಗ್ರೆಸ್ ಪಕ್ಷದ ಆಂತರಿಕ ಅಧಿಕಾರ ಹಂಚಿಕೆ ಸೂತ್ರದಂತೆ ಈ ಬದಲಾವಣೆ ಸಂಭವಿಸಿದೆ. ಈ ಬೆಳವಣಿಗೆಯು ರಾಜ್ಯದಲ್ಲಿ ನೂತನ ಸರ್ಕಾರದ ರಚನೆಗೆ ವೇದಿಕೆ ಕಲ್ಪಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು