10:21 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬಂಟ್ವಾಳ ಸಜಿಪಮೂಡ | ಅಕ್ರಮ ಜಾನುವಾರು ವಧೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

29/05/2026, 21:33

ಬಂಟ್ವಾಳ(reporterkarnataka.com): ಅಕ್ರಮ ಜಾನುವಾರು ವಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಜಾನುವಾರುಗಳು ಹಾಗೂ ಮಾಂಸ ಸ್ವಾಧೀನ ಪಡಿಸಿಕೊಂಡಿದ್ದಾರೆ.
ಮೇ 27ರಂದು ರಾತ್ರಿ, ಅಕ್ರಮ ಜಾನುವಾರು ವಧೆ ನಡೆಯುತ್ತಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಸಂದೀಪ್‌ ಕುಮಾರ್‌ ಶೆಟ್ಟಿ ಅವರಿಗೆ ಮಾಹಿತಿ ಬಂದ ಮೇರೆಗೆ ಸಿಬ್ಬಂದಿಗಳೊಂದಿಗೆ ಬಂಟ್ವಾಳ ಸಜಿಪಮೂಡ ಗ್ರಾಮದ ಪಂಜಾಜೆ ಎಂಬಲ್ಲಿಗೆ ತೆರಳಿ ಪರಿಶೀಲಿಸಿದಾಗ, ಮನೆಯೊಂದರ ಹಿಂಬದಿಯ ಕೊಟ್ಟಿಗೆಯಲ್ಲಿ ಮಾಂಸ ಕತ್ತರಿಸುತ್ತಿರುವುದು ಕಂಡುಬಂದಿರುತ್ತದೆ. ಈ ವೇಳೆ ಧಾಳಿ ನಡೆಸಿ ಇಬ್ಬರನ್ನು ಹಿಡಿದು ವಿಚಾರಿಸಿದಾಗ, ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್‌ ಸಾದೀಕ್‌ (30) ಎಂಬುದಾಗಿ ತಿಳಿದುಬಂದಿರುತ್ತದೆ. ವಿಚಾರಣೆಯ ವೇಳೆ ಆರೋಪಿಗಳು ಪರವಾನಿಗೆ ಹೊಂದದೇ ಅಕ್ರಮವಾಗಿ ಕೃತ್ಯ ನಡೆಸುತ್ತಿರುವುದು ಧೃಢಪಟ್ಟಿದ್ದು, ಸ್ಥಳದಲ್ಲಿ ಒಂದು ಜಾನುವಾರನ್ನು ವಧೆ ಮಾಡಿ ಕತ್ತರಿಸಲಾದ ಮಾಂಸ, 6 ಜಾನುವಾರುಗಳು, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ ಸಾಮಾಗ್ರಿಗಳು ಪತ್ತೆಯಾಗಿರುತ್ತದೆ. ಮುಂದಿನ ಕಾನೂನು ಕ್ರಮಕ್ಕಾಗಿ ಆರೊಪಿಗಳನ್ನು ಜಾನುವಾರುಗಳನ್ನು ಮತ್ತು ಇತರೆ ಸೊತ್ತುಗಳೊಂದಿಗೆ ವಶಕ್ಕೆ ಪಡೆದು, ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ 68/2026, ಕಲಂ: 4,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು