12:38 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಆಗಮನ: ಧರ್ಮಸ್ಥಳದಲ್ಲಿ ವಾಸ್ತವ್ಯ

30/05/2026, 22:09

ಮಂಗಳೂರು(reporterkarnataka.com): ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು.
ವಾಯುಪಡೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳನ್ನು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕರಾವಳಿಯ ಮಲ್ಲಿಗೆ ಹಾರವನ್ನು ಹಾಕಿ ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಅವರು ಉಪಸ್ಥಿತರಿದ್ದು, ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು.
ಬಳಿಕ ಅವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿ, ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ ಹೂಡಿದರು. ಭಾನುವಾರ ಬೆಳಿಗ್ಗೆ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ಬಳಿಕ ಅಮೃತವರ್ಷಿನಿ ಸಭಾಂಗಣದಲ್ಲಿ ಸಿರಿ ಕೈಗಾರಿಕಾ ಪಾರ್ಕ್ ಉದ್ಘಾಟನೆ ನೆರವೇರಿಸಲಿದ್ದಾರೆ.
ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಹಾಗೂ ಧರ್ಮಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು