8:28 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಇಂದು ರಾಜ್ಯ ಸಚಿವ ಸಂಪುಟ ಸರ್ಕಸ್ : ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

02/06/2026, 08:43

ಬೆಂಗಳೂರು(reporterkarnataka com): ರಾಜ್ಯ ರಾಜಕಾರಣದ ಸಚಿವ ಸಂಪುಟ ರಚನೆಯ ಕುತೂಹಲ ಈಗ ದೆಹಲಿ ತಲುಪಿದೆ. ನಿನ್ನೆ ಸೋಮವಾರವೇ ನಡೆಯಬೇಕಿದ್ದ ಹೈಕಮಾಂಡ್‌ನ ಪ್ರಮುಖ ಸಭೆಯು ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಅವರು ತಡವಾಗಿ ರಾಜಧಾನಿ ತಲುಪಿದ ಕಾರಣದಿಂದ ಇವತ್ತಿಗೆ ಮುಂದೂಡಿಕೆಯಾಗಿದೆ. ಯಾರಿಗೆ ಒಲಿಯಲಿದೆ ಸಚಿವ ಸ್ಥಾನ?
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ತಮ್ಮದೇ ಆದ ಬೆಂಬಲಿಗರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಹೈಕಮಾಂಡ್ ಮುಂದೆ ಇಟ್ಟಿದ್ದಾರೆ. ಮೊದಲ ಸುತ್ತಿನಲ್ಲಿ ಈ ಪಟ್ಟಿಗಳ ಬಗ್ಗೆ ಚರ್ಚೆ ನಡೆಸಿ, ಆ ಬಳಿಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಅಂತಿಮ ಸಚಿವರ ಹೆಸರನ್ನು ಫೈನಲ್ ಮಾಡಲಾಗುತ್ತದೆ. ಇವತ್ತೇ ಈ ಕುರಿತು ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದ್ದು, ನಾಳೆಯೇ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಬಹುದು ಎಂದು ಹೇಳಲಾಗುತ್ತಿದೆ.

ಸಂಭಾವ್ಯ ಸಚಿವರ ರೇಸ್‌ನಲ್ಲಿರುವ ಪ್ರಮುಖರು:

ಡಾ. ಜಿ. ಪರಮೇಶ್ವರ್

ಸತೀಶ್ ಜಾರಕಿಹೊಳಿ

ಎಂ.ಬಿ. ಪಾಟೀಲ್ / ಈಶ್ವರ್ ಖಂಡ್ರೆ

ಕೆ.ಜೆ. ಜಾರ್ಜ್

ಕೆ.ಎಚ್. ಮುನಿಯಪ್ಪ / ಪ್ರಿಯಾಂಕ್ ಖರ್ಗೆ

ಬೈರತಿ ಸುರೇಶ್

ಬಿ.ಕೆ. ಹರಿಪ್ರಸಾದ್

ಯು.ಟಿ. ಖಾದರ್

ರಾಮಲಿಂಗಾರೆಡ್ಡಿ

ಕೆಪಿಸಿಸಿ ಸಾರಥ್ಯಕ್ಕೆ ಸತೀಶ್-ಹರಿಪ್ರಸಾದ್ ಫೈಟ್!
ಮತ್ತೊಂದೆಡೆ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿರುವುದರಿಂದ, ಕೆಪಿಸಿಸಿ ಅಧ್ಯಕ್ಷ ಗಾದಿಯನ್ನು ಒಕ್ಕಲಿಗ ಅಥವಾ ಹಿಂದುಳಿದ ವರ್ಗಕ್ಕೆ (OBC) ನೀಡಲು ಕಾಂಗ್ರೆಸ್ ನಾಯಕರು ಒಲವು ತೋರಿದ್ದಾರೆ. ಹೀಗಾಗಿ ಸದ್ಯ ಖಾಲಿ ಇರುವ ಈ ಕೆಪಿಸಿಸಿ ಸಾರಥ್ಯವನ್ನು ವಹಿಸಿಕೊಳ್ಳಲು ಹಿರಿಯ ನಾಯಕರಾದ ಸತೀಶ್ ಜಾರಕಿಹೊಳಿ ಹಾಗೂ ಬಿ.ಕೆ. ಹರಿಪ್ರಸಾದ್ ನಡುವೆ ಭರ್ಜರಿ ಪೈಪೋಟಿ ಶುರುವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು