5:41 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Bantwala | ಮಾಣಿಯ ಕರ್ನಾಟಕ ಪ್ರೌಢ ಶಾಲೆಯ ಇಬ್ಬರು ಸಿಬ್ಬಂದಿಗಳಿಗೆ ಬೀಳ್ಕೊಡುಗೆ

02/06/2026, 15:33

ಮಾಣಿ(reporterkarnataka.com): ಕಡು ಬಡತನದ ಮಧ್ಯೆಯೂ ಅವಿಭಕ್ತ ಕುಟುಂಬದ ಜವಾಬ್ದಾರಿಯುತ ಯಜಮಾನನಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಯಕ್ಷ ಪ್ರೇಮಿಯಾಗಿ ಬೆಳೆದವರು ತಿಮ್ಮಪ್ಪ ಅವರು ಎಂದು ಗ್ರಾಪಂ ಮಾಜಿ ಅಧ್ಯಕ್ಷ, ಶಾಲಾ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಅವರು ಮಾಣಿಯ ಕರ್ನಾಟಕ ಪ್ರೌಢ ಶಾಲೆಯಲ್ಲಿ ಕಳೆದ 40 ವರ್ಷಗಳಿಂದ ಡಿ – ಗ್ರೂಪ್ ನೌಕರನಾಗಿದ್ದು ವಯೋನಿವೃತ್ತಿ ಹೊಂದಿದ ಪಿ. ತಿಮ್ಮಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡಿದರು.
ಕಳೆದ 20 ವರ್ಷಗಳಿಂದ ಅಡುಗೆ ಸಿಬ್ಬಂದಿಯಾಗಿ ಸೇವೆಗೈದು ನಿವೃತ್ತಿ ಹೊಂದಿದ ಗಂಗಮ್ಮ ಅವರ ಬಗ್ಗೆ ಹಿರಿಯ ಶಿಕ್ಷಕಿ ಶ್ಯಾಮಲಾ ಕೆ. ಮಾತನಾಡುತ್ತಾ ಅತಿ
ಕಡಿಮೆ ಸಂಬಳ ಪಡೆದರೂ ಕೆಲಸದ ಮೇಲಿನ ಶ್ರದ್ಧೆ ಮತ್ತು ವಿದ್ಯಾರ್ಥಿಗಳ ಪ್ರೀತಿಯಿಂದಾಗಿ ಲಾಕ್ ಡೌನ್ ಸಂದರ್ಭದಲ್ಲಿ ಕೂಡ ಕರ್ತವ್ಯ ನಿರ್ವಹಿಸಿ ಬದ್ಧತೆ ಮೆರೆದಿದ್ದಾರೆ ಎಂದು ಕೊಂಡಾಡಿದರು.
ಇದೇ ಸಂದರ್ಭ ಸುಮಾರು 10 ವರ್ಷಗಳಿಂದ ಗೌರವ ಶಿಕ್ಷಕಿಯಾಗಿ ಸೇವೆಗೈದ ಸುಶ್ಮಿತಾ ಎ.ವಿ. ಅವರನ್ನು ಗೌರವಿಸಲಾಯಿತು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಕೆ. ಇಬ್ರಾಹಿಂ, ಗ್ರಾಪಂ ಪಿಡಿಓ ಗಿರಿಜಾ, ನಿವೃತ್ತ ಶಿಕ್ಷಕರುಗಳಾದ ಬಿ.ಕೆ. ಭಂಡಾರಿ, ಪಿ. ಗಂಗಾಧರ ರೈ.ಎಂ. ಕೆ. ಬಾಲಕೃಷ್ಣ, ಐ. ಜಯಲಕ್ಷ್ಮಿ , ಕೃಷ್ಣಪ್ಪ ನಾಯ್ಕ, Bantwala | ಮಾಣಿಯ ಕರ್ನಾಟಕ ಪ್ರೌಢ ಶಾಲೆಯ ಇಬ್ಬರು ಸಿಬ್ಬಂದಿಗಳಿಗೆ ಬೀಳ್ಕೊಡುಗೆ
ಜಯಾನಂದ ಪೆರಾಜೆ ಶುಭಹಾರೈಸಿದರು.
ಮುಖ್ಯ ಶಿಕ್ಷಕ ಎಸ್ . ಚೆನ್ನಪ್ಪ ಗೌಡ ಸ್ವಾಗತಿಸಿದರು. ಹಿರಿಯ ಶಿಕ್ಷಕ ಎನ್. ಗಂಗಾಧರ ಗೌಡ ವಂದಿಸಿದರು‌. ಹಿಂದಿ ಶಿಕ್ಷಕ ಜಯರಾಮ ಕಾಂಚನ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಪ್ರತಿಮಾ ಮತ್ತು ಅಭಿಲಾಷ್ ಕುಮಾರ್ ಜಿ. ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು