12:16 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

03/06/2026, 18:07

ಬೆಂಗಳೂರು(reporterkarnataka.com): ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಲೋಕಭವನದ ಗಾಜಿನ ಮನೆ ವೇದಿಕೆಯಲ್ಲಿ ನಡೆದ ಸರಳ, ಸಂಭ್ರಮದ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ ನೆರವೇರಿಸಲಾಯಿತು.
ತಾನು ಬಹಳ ಪ್ರೀತಿಸುವ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಸಂಜೆ 4.05 ಗಂಟೆಗೆ ಸರಿಯಾಗಿ ವೇದಿಕೆಯಲ್ಲಿ ಧೀರ್ಘ ದಂಡ ನಮಸ್ಕಾರ ಮಾಡಿ, ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯ ಪಾಲ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಮಲ್ಲಿಕಾಜು೯ನ ಖಗೆ೯, ರಣದೀಪ್ ಸುಜಿ೯ವಾಲ, ಕೇರಳಂ ಸಿಎಂ ವಿ.ಡಿ. ಸತೀಶ್, ಕೆ.ಸಿ. ವೇಣುಗೋಪಾಲ್, ನಿಕಟಪೂವ೯ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪ್ರಮುಖರು, ವಿವಿಧ ಧರ್ಮ ಗುರುಗಳು, ಸಿನಿ ತಾರೆಯರು ಪಾಲ್ಗೊಂಡಿದ್ದರು.
ಕಾಂಗ್ರೆಸ್ ಕಾಯಕತ೯ರ ಹಷೋ೯ದ್ಘಾರದ ನಡುವೇ ಮುಖ್ಯಮಂತ್ರಿಯಾಗಿ ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡಿದರು.
ಕೊಡಗಿನ ಶಾಸಕಧ್ವಯರಾದ ಎ. ಎಸ್. ಪೊನ್ನಣ್ಣ ಮತ್ತು
ಡಾ.ಮಂಥರ್ ಗೌಡ ಅವರು ನೂತನ ಮುಖ್ಯಮಂತ್ರಿ ಗೆ ಅಭಿನಂದನೆ ಸಲ್ಲಿಸಿದರು.
ಕೊಡಗಿನಲ್ಲಿ ಎಲ್ ಇ ಡಿ ಪರದೆಯ ಮೂಲಕ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾಯ೯ಕ್ರಮವನ್ನು ಕಾಂಗ್ರೆಸ್ಸಿಗರು ವೀಕ್ಷಿಸಿದರು.
ಏಕೈಕ ಉಪ ಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಪದಗ್ರಹಣ ಮಾಡಿದರು.
ಕಾರ್ಯಕ್ರಮಕ್ಕೆ ಮುನ್ನ ವಂದೇ ಮಾತರಂ ಮತ್ತು ನಾಡಗೀತೆ, ಪೊಲೀಸ್ ಬ್ಯಾಂಡ್ ಗೆ ಗೌರವ ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು