9:56 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕರಾವಳಿ ಬೆಡಗಿ ನಟಿ ಶುಭಾ ಪೂಂಜಾ-ಸುಮಂತ್ ದಾಂಪತ್ಯದಲ್ಲಿ ಬಿರುಕು: ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಗೆ ಮೊರೆ

04/06/2026, 13:40

ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ.
ಕನ್ನಡದ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಈ ದಂಪತಿ ಅತ್ಯಂತ ಖುಷಿ ಖುಷಿಯಾಗಿಯೇ ಕಾಲ ಕಳೆದಿದ್ದರು. ಆದರೆ, ಈಗ ಏಕಾಏಕಿ ಬೇರೆ ಆಗಲು ಮುಂದಾಗಿರೋದು ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.
ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ಕೋರಿ ಈ ದಂಪತಿ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಅರ್ಜಿ ಸಲ್ಲಿಕೆಯಾಗಿದ್ದು, ಮುಂದಿನ ವಿಚಾರಣೆಯ ವೇಳೆ ಶುಭಾ ಪೂಂಜಾ ಮತ್ತು ಸುಮಂತ್ ಇಬ್ಬರೂ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆ ಇದೆ. ಆದರೆ, ಇಬ್ಬರ ನಡುವಿನ ವಿಚ್ಛೇದನಕ್ಕೆ ನಿಖರವಾದ ಕಾರಣವೇನು ಎಂಬುದನ್ನು ಬಹಿರಂಗಪಡಿಸಲು ಸುಮಂತ್ ನಿರಾಕರಿಸಿದ್ದಾರೆ. ಈಗಾಗಲೇ ಶುಭಾ ಅವರು ಸೋಶಿಯಲ್ ಮೀಡಿಯಾದಿಂದ ಪತಿ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದಾರೆ.

*ಬಿಗ್ ಬಾಸ್ ಮೂಲಕ ಗಮನ ಸೆಳೆದಿದ್ದ ಶುಭಾ:*
ಸಿನಿಮಾಗಳಷ್ಟೇ ಅಲ್ಲದೆ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ಶುಭಾ ಪೂಂಜಾ ತಮ್ಮ ಮುಗ್ಧ ಹಾಗೂ ಚುರುಕಿನ ನಡವಳಿಕೆಯಿಂದ ಅಪಾರ ಪ್ರೇಕ್ಷಕರ ಗಮನ ಸೆಳೆದಿದ್ದರು. ಸದಾ ನಗುನಗುತ್ತಾ ಇರುತ್ತಿದ್ದ ಶುಭಾ ಪೂಂಜಾ ಅವರ ದಾಂಪತ್ಯ ಜೀವನದಲ್ಲಿ ಈ ರೀತಿಯ ಬಿರುಗಾಳಿ ಎದ್ದಿರುವುದು ಅವರ ಅಭಿಮಾನಿಗಳಿಗೆ ತೀವ್ರ ನಿರಾಶೆ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು