12:53 AM Thursday29 - October 2026
ಬ್ರೇಕಿಂಗ್ ನ್ಯೂಸ್
4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ

ಇತ್ತೀಚಿನ ಸುದ್ದಿ

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ: ಎಲ್ಲ ಇಲಾಖೆಗಳ ಕಾರ್ಯದರ್ಶಿಗಳ ಸಭೆ

04/06/2026, 19:42

ಬೆಂಗಳೂರು(reporterkarnataka.com):ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕ್ಷಣದಿಂದಲೂ ಡಿ.ಕೆ. ಶಿವಕುಮಾರ್ ಅವರ ಪ್ರತಿಯೊಂದು ನಡೆ ಹಾಗೂ ನಿರ್ಧಾರಗಳು ಭಾರೀ ಕುತೂಹಲ ಮೂಡಿಸುತ್ತಿವೆ. ರಾಜಕೀಯ ತಂತ್ರಗಾರಿಕೆಯಲ್ಲಿ ಸೈ ಎನಿಸಿಕೊಂಡಿರುವ ಡಿಕೆಶಿ, ಇದೀಗ ಒಂದೊಳ್ಳೆ ಆಡಳಿತ ನೀಡಲು ತಮ್ಮದೇ ನೀಲನಕ್ಷೆ ಹಾಕಿಕೊಂಡಿದ್ದು, ಅದಕ್ಕೆ ತಕ್ಕಂತೆ ಅಧಿಕಾರಿಗಳನ್ನು ಬಡಿದೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಸಿಎಂ ಆದ ಬಳಿಕೆ ಡಿಕೆ ಶಿವಕುಮಾರ್ ಅವರು ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ಸಭೆ ನಡೆಸುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ.


ಅದರಲ್ಲೂ ಮುಖ್ಯವಾಗಿ ಕಾನೂನು ಸುವವ್ಯಸ್ಥೆ ಹಾಗೂ ಭ್ರಷ್ಟಾಚಾರ ಬಗ್ಗೆ ಅಧಿಕಾರಿಗಳಿಗೆ ಖಡಕ್ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಪಾರದರ್ಶಕವಾಗಿ ಕೆಲಸ ಮಾಡುವಂತೆ ಸೂಚನೆ
ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ. ಅದಕ್ಕೆ ತಕ್ಕಂತೆ ಯಾವುದೇ ಒತ್ತಡಕ್ಕೆ ಮಣಿಯದೆ ಜನರ ಕೆಲಸ ಮಾಡಬೇಕು. ನಮ್ಮ ಸರ್ಕಾರದಲ್ಲಿ ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ. ಎಲ್ಲಾ ಇಲಾಖೆಗಳ ಬಾಕಿ ಕೆಲಸದ ಪಟ್ಟಿಯನ್ನು 25 ದಿನದೊಳಗೆ ಪಟ್ಟಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸುವ ಮೂಲಕ ಪಾರದರ್ಶಕವಾಗಿ ಕೆಲಸ ಮಾಡುವಂತೆ ತಿಳಿಸಿದ್ದಾರೆ.
ಜನ ಮೆಚ್ಚುವಂತಹ ಆಡಳಿತ ನೀಡುವುದು, ಸಾರ್ವಜನಿಕರ ಸಂಕಷ್ಟಗಳನ್ನು ಬಗೆಹರಿಸುವುದು, ಮತ್ತು ಅಭಿವೃದ್ಧಿಯನ್ನು ಸುಗಮಗೊಳಿಸುವುದು ತಮ್ಮ ಸರ್ಕಾರದ ಮುಖ್ಯ ಉದ್ದೇಶ. ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಪಾತ್ರವನ್ನು ಅವರು ಮನವರಿಕೆ ಮಾಡಿಕೊಟ್ಟರು. ಯಾವುದೇ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು ಎಂದು ಖಡಕ್ ಆಗಿ ಹೇಳಿದ್ದಾರೆ.
ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಹೀಗಾಗಿ ಅಧಿಕಾರಿಗಳು ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಬೇಕು. ಸರ್ಕಾರದ ಯೋಜನೆಗಳು ಸಮರ್ಥವಾಗಿ ಜನರಿಗೆ ತಲುಪಿಸಬೇಕು. ಅಭಿವೃದ್ಧಿ ಹಾದಿಗೆ ಮೆಟ್ಟಿಲಾಗಿ ಮೆಚ್ಚುವಂತೆ ಕೆಲಸ ಮಾಡಬೇಕೆಂದು ನಯವಾಗಿಯೇ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು