5:44 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ತಿತಿಮತಿ ಕಾಡಾನೆ ದಾಳಿ: ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ

05/06/2026, 18:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ತಮ್ಮ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗ, ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಎಂಬುವರ ಮೇಲೆ ಹಾಗೂ ಇತರ ನಾಲ್ಕು ಮಂದಿಯ ಮೇಲೆ ಕಾಡಾನೆ ಅಚಾನಕ್ ದಾಳಿ ನಡೆಸಿದೆ.
ಆನೆ ದಾಳಿಗೆ ಒಳಗಾಗಿ ಗಾಯಗೊಂಡವರನ್ನು ಲೋಪಾಮುದ್ರ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ, ಸಂಧ್ಯಾ ಅವರು ದಾಳಿಯ ತೀವ್ರತೆಯಿಂದ ಮೃತಪಟ್ಟರು.
ಆಸ್ಪತ್ರೆಯಲ್ಲಿದ್ದ ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರು ಆಲಿರ ರಶೀದ್, ಪ್ರಮುಖರು ಸೂರಜ್ ಹೊಸೂರು, ರಾಜು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು