12:38 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Bantwal | ಮೇಲ್ಕಾರ್: 7.64 ಲಕ್ಷ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ವಶ; 3 ಮಂದಿ ಬಂಧನ

06/06/2026, 11:12

ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ಮೇಲ್ಕಾರ್ ಬಳಿ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು 7.64 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಬಂಟ್ವಾಳ ಪುದು ನಿವಾಸಿ ಎ. ಜುಬೈರ್ (39), ಬಂಟ್ವಾಳ ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಂಟ್ವಾಳ ಬಿ ಮೂಡ ನಿವಾಸಿ ಬಿ.ಎಮ್. ರಶೀದ್ ಎಂದು ಗುರುತಿಸಲಾಗಿದೆ.
ಜೂನ್ 4ರಂದು ಸಂಜೆ, ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್‌ ಕುಮಾರ್‌ ಶೆಟ್ಟಿ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಮೆಲ್ಕಾರ್ ಪ್ಲೈಒವರ್ ಬಳಿ ಕಾರೊಂದನ್ನು ತಪಾಸಣೆಗಾಗಿ ನಿಲ್ಲಿಸಿದ್ದು, ಕಾರಿನಲ್ಲಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿದ್ದರು. ಕಾರನ್ನು ಪರಿಶೀಲಿಸಿದಾಗ ಮನೋದ್ರೇಕಕಾರಿ ವಸ್ತು ಸೇವನೆ ಮಾಡಲು ಬಳಸುವ ಸಾಧನ ಕಂಡುಬಂದಿದ್ದು, ಈ ಬಗ್ಗೆ ಅವರನ್ನು ವಿಚಾರಿಸಿದಾಗ,ಜುಬೈರ್, ಮೊಹಮ್ಮದ್ ಸವಾದ್ ಹಾಗೂ ಬಿ.ಎಮ್. ರಶೀದ್ ಯಾನೆ ಮಾರಿಮುತ್ತು ಅವರು ತಾವು ಎಂಡಿಎಂಎ ಮಾದಕದ್ರವ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ತಿಳಿಸಿದ್ದು, ತಪಾಸಣೆ ನಡೆಸಿದಾಗ ಆರೋಪಿಗಳ ಬಳಿ ಹಾಗೂ ಕಾರಿನಲ್ಲಿ ಅಂದಾಜು ರೂ 7,64,000-/ ಮೌಲ್ಯದ ಒಟ್ಟು 76 ಗ್ರಾಂ 40 ಮಿಲಿಗ್ರಾಂ ಎಂಡಿಎಂಎ ಮಾದಕದ್ರವ್ಯ ಹಾಗೂ ಮಾದಕ ವಸ್ತು ಸೇವನೆ ಮಾಡಲು ಉಪಯೋಗಿಸುವ ಸಾಧನ ಪತ್ತೆಯಾಗಿರುತ್ತದೆ. ಸೊತ್ತುಗಳನ್ನು, ಆರೋಪಿಗಳ ಬಳಿಯಿದ್ದ 3 ಮೊಬೈಲ್ ಪೋನ್ ಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ K,A 19 MR 1997 ನೊಂದಣಿಯ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು