5:47 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ತಡರಾತ್ರಿ ರಹಸ್ಯ ಸಭೆ ಸಕ್ಸಸ್: ರಾಮಲಿಂಗಾ ರೆಡ್ಡಿ ಮನವೊಲಿಸಿದ ಸಿಎಂ ಡಿ.ಕೆ. ಶಿವಕುಮಾರ್

06/06/2026, 11:25

ಬೆಂಗಳೂರು(reporterkarnataka.com): ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ ಜೊತೆಗಿನ ಸಂಧಾನ ಸಕ್ಸಸ್ ಆಗಿದೆ. ಕಳೆದ ರಾತ್ರಿ ರಾಮಲಿಂಗಾರೆಡ್ಡಿ ಜೊತೆಗೆ ಸಿಎಂ ಡಿ.ಕೆ. ಶಿವಕುಮಾರ್ ಒನ್ ಟು ಒನ್ ಮೀಟಿಂಗ್ ಮಾಡಿದ್ದಾರೆ. ಜಯನಗರದ ಹೋಟೆಲ್ ವೊಂದರಲ್ಲಿ ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡೆಸಿದ್ದಾರೆ. ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ರಾಮಲಿಂಗಾರೆಡ್ಡಿ ಅವರ ಮನವೊಲಿಸಿದ್ದಾರೆ.
ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂವರೆ ಗಂಟೆಗಳ ಕಾಲ ಮಾತುಕತೆ ನಡೆಸಲಾಗಿದೆ. ಸಭೆ ಬಳಿಕ ತಮ್ಮ ನಿಲುವಿನ ಬಗ್ಗೆ ರಾಮಲಿಂಗಾರೆಡ್ಡಿ ಇನ್ನೂ ಸ್ಪಷ್ಟಪಡಿಸಿಲ್ಲ. ಇದು ಪಕ್ಷದ ವಿಚಾರ ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದಷ್ಟೇ ಸಿಎಂ ಹೇಳಿದ್ದಾರೆ.
ನಾವೆಲ್ಲ ಕೂತು ಮಾತನಾಡಿದ್ದೇವೆ. ಪರಿಹಾರ ಆಗಿದೆ ಎಂದು ರಾಮಲಿಂಗಾರೆಡ್ಡಿ ಮನವೊಲಿಕೆ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇದು ನಮ್ಮ ಫ್ಯಾಮಿಲಿ ಪ್ರಾಬ್ಲಮ್, ನಾನು, ರಾಮಲಿಂಗಾರೆಡ್ಡಿ, ಹೆಚ್.ಎಂ. ರೇವಣ್ಣ 1980ರಿಂದಲೂ ಸ್ನೇಹಿತರು. ನಾನು ಚೀಫ್ ಮಿನಿಸ್ಟರ್, ರಾಮಲಿಂಗಾರೆಡ್ಡಿ ಮಿನಿಸ್ಟರ್. ನಾವೆಲ್ಲರೂ ಸ್ನೇಹಿತರು. ನಾವು ಕಾಂಗ್ರೆಸ್ ನಲ್ಲಿ ಬೆಳೆದವರು. ಪಕ್ಷವನ್ನು ಬೆಳೆಸುತ್ತಿರುವವರು. ಬೆಂಗಳೂರು ಅಭಿವೃದ್ಧಿ ಆಗಬೇಕು ಎನ್ನುವವರು. ರಾಮಲಿಂಗಾರೆಡ್ಡಿ ಏನು ಪಕ್ಷ ಬಿಟ್ಟು ಹೋಗುತ್ತೇನೆ ಎಂದು ಹೇಳಿಲ್ಲ. ಅವರ ನೋವು ಹೇಳಿಕೊಂಡಿದ್ದಾರೆ. ಮಿಸ್ ಕಮ್ಯುನಿಕೇಷನ್ ಆಗಿದೆ ಎಂದು ಹೇಳಿದ್ದಾರೆ.
ತಮಗೆ ಜಲ ಸಂಪನ್ಮೂಲ ಖಾತೆ ಬೇಡ ಎಂದಿದ್ದಾರೆ. ಎಲ್ಲವನ್ನು ಹೇಳಬೇಕಾದ ಅನಿವಾರ್ಯತೆ ಇಲ್ಲ. ನಾವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಫಸ್ಟ್ ಕ್ಲಾಸ್ ಆಗಿ ನಡೆಸುತ್ತಿದ್ದೇವೆ. ಹಿರಿಯ ನಾಯಕರಿಗೆ ಅವಕಾಶ ಕೊಟ್ಟಿದ್ದೇವೆ. ಎಲ್ಲಾ ಸರಿ ಮಾಡುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಎಲ್ಲಾ ನಿವಾರಣೆಯಾಗಿದೆ. ಅವರು ಏನು ಹೇಳಿದರೋ ಅದನ್ನೇ ನಾನು ಹೇಳೋದು ಎಂದು ಡಿ.ಕೆ. ಶಿವಕುಮಾರ್ ಜತೆಗಿನ ಸಭೆ ಬಳಿಕ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು