1:57 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜನ್ಮದಿನ: ಬಿಜೆಪಿ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನಿಂದ ರಕ್ತದಾನ ಶಿಬಿರ, ಕೊರೊನಾ ಲಸಿಕೆ ಶಿಬಿರ

17/09/2021, 19:16

ಮಂಗಳೂರು(reporterkarnataka.com); ದ.ಕ. ಜಿಲ್ಲಾ ಬಿಜೆಪಿ ಹಾಗೂ ಮಂಗಳೂರಿನ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ  ರಕ್ತದಾನ ಶಿಬಿರ ಹಾಗೂ ಉಚಿತ ಕೋವಿಡ್ ಲಸಿಕಾ ಶಿಬಿರ ಜರುಗಿತು.

ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಬಿರವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಉದ್ಘಾಟಿಸಿದರು.

100ಕ್ಕಿಂತಲೂ ಹೆಚ್ಚು ನಾಗರಿಕರು ರಕ್ತದಾನ ಮಾಡಿದರು. 450 ಕ್ಕಿಂತಲೂ ಮಿಕ್ಕಿ ಸಾರ್ವಜನಿಕರು ಉಚಿತ ಕೋವಿಡ್ ಲಸಿಕೆಯನ್ನು ಪಡೆದರು. 

ಶಿಬಿರದಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹನುಮಂತ್ ಕಾಮತ್, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್ ಹಾಗೂ ಹಿತೈಷಿಗಳು, ಗಣ್ಯರು ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು