ಇತ್ತೀಚಿನ ಸುದ್ದಿ
ಕಲಬುರಗಿ: ಲೋಕಾಯುಕ್ತ ದಾಳಿ; ಲಂಚ ಪಡೆಯುವಾಗಲೇ ಎಎಸ್‌ಐ, ಲೇಡಿ ಕಾನ್ಸ್‌ಟೇಬಲ್ ಲಾಕ್!
07/06/2026, 19:20
ಕಲಬುರಗಿ(reporterkarnataka.com): ಪೊಲೀಸ್ ಠಾಣೆಯಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಎಎಸ್‌ಐ ಮತ್ತು ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಲೋಕಾಯುಕ್ತ ಬಳಿ ಲಾಕ್ ಆಗಿದ್ದಾರೆ.
ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡೋದಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಎಎಸ್‌ಐ ಶಿವಶರಣಪ್ಪ ಮತ್ತು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಜ್ಯೋತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಸಿಪಿಐ ಅರುಣ್ ಕುಮಾರ್ ಮುರಗುಂಡಿ ನೇತೃತ್ವದಲ್ಲಿ ದಾಳಿ ನಡೆಸಿ ಪಿಎಸ್ಐ ಮತ್ತು ಮಹಿಳಾ ಕಾನ್ಸ್‌ಟೇಬಲ್ ಅವರನ್ನು ರೆಡ್ ಹ್ಯಾಂಡ್ ಆಗಿ ಲಾಕ್ ಮಾಡಿದ್ದಾರೆ.
ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಎಎಸ್‌ಐ ಶಿವಶರಣಪ್ಪ ಮತ್ತು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಜ್ಯೋತಿ ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡೋದಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು, ವ್ಯಕ್ತಿಯೊಬ್ಬರ ಬಳಿ ಒಂದು ಸಾವಿರ ಹಣ ಪಡೆದು ಮತ್ತೆ 10 ಸಾವಿರಕ್ಕೆ ಕೊಡುವಂತೆ ಕೇಳಿದ್ದರು. ಬಳಿಕ 10 ಸಾವಿರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲಾಕ್ ಆಗಿದ್ದು, ಎಎಸ್‌ಐ ಶಿವಶರಣಪ್ಪ ಮತ್ತು ಮಹಿಳಾ ಕಾನ್ಸ್‌ಟೇಬಲ್ ಜ್ಯೋತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.












