7:46 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ದಾಖಲೆ ಬರೆದ ಅಡಿಕೆ ಬೆಲೆ: ಬೆಳ್ಳಾರೆಯಲ್ಲಿ ಕೆಜಿಗೆ 505 ರೂಪಾಯಿಗೆ ಮಾರಾಟ; ಇನ್ನೂ ಹೆಚ್ಚುವ ಸಾಧ್ಯತೆ

17/09/2021, 19:34

ಪುತ್ತೂರು(reporterkarnataka.com):
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಮಾರುಕಟ್ಟೆಯಲ್ಲಿ ಅಡಿಕೆ ಕೆಜಿಗೆ 505 ರೂಪಾಯಿಗೆ ಮಾರಾಟವಾಗುವ ಮೂಲಕ ದಾಖಲೆ ಬರೆದಿದೆ‌. ಕ್ವಿಂಟಾಲ್‌ ಅಡಿಕೆ 50 ಸಾವಿರದ ಗಡಿ ದಾಟಿದ್ದು ಅಡಿಕೆ ಧಾರಾಣೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ. 

ಕಳೆದ ವರ್ಷ ಅಡಿಕೆ ಇದ್ದರೂ ಧಾರಣೆ 450 ಆಸುಪಾಸಿನಲ್ಲಿತ್ತು. ಆದರೆ ಈ ವರ್ಷ ಕೆಲವು ಹೆಬ್ರಿ ಮಲೆನಾಡಿನ ಭಾಗಗಳಲ್ಲಿ ಅಧಿಕ ಮಳೆಯಿಂದ ಕೊಳೆರೋಗ ಅಧಿಕವಾಗಿ ವ್ಯಾಪಿಸಿದೆ. ಇದರಿಂದಾಗಿ ಅಡಿಕೆ ಫಸಲು ಕಮ್ಮಿಯಾಗಬಹುದು  ಕೃಷಿಕರ ಊಹೆಯಾಗಿದೆ.

ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆಗೆ 480 ರೂಪಾಯಿ ದರವಿದೆ. ಆದ್ರೆ ಈ ದರ ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು