ಇತ್ತೀಚಿನ ಸುದ್ದಿ
ಕಾರ್ಕಳ: ಗೃಹ ಸಚಿವರ ವಿರುದ್ಧ ಜಾತಿ ನಿಂದನೆ ಕಮೆಂಟ್: ಕೆರ್ವಾಶೆ ನಿವಾಸಿಯ ಬಂಧನ
07/06/2026, 21:10
ಕಾರ್ಕಳ(reporterkarnataka.com): ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಹಾಗೂ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಆರೋಪಿ ಸುಧೀರ್ ಬಂಗೇರ (48) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕೆರ್ವಾಶೆ ನಿವಾಸಿ ಸುಧೀರ್ ಬಂಗೇರ ಫೇಸ್ಬುಕ್ ಪೇಜ್ ನಲ್ಲಿ ಗೃಹ ಸಚಿವರ ಕುರಿತಾದ ಪೋಸ್ಟ್ವೊಂದರಲ್ಲಿ ಸಚಿವರ ಜಾತಿಯನ್ನು ಉಲ್ಲೇಖಿಸಿ ನಿಂದಿಸಿದ್ದಲ್ಲದೆ, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಹಾಗೂ ವಿವಿಧ ಸಮುದಾಯಗಳ ನಡುವೆ ದ್ವೇಷ ಬಿತ್ತುವ ಉದ್ದೇಶದ ಕಾಮೆಂಟ್ ಮಾಡಿದ್ದ ಎಂದು ಸುರೇಶ್ ಎಂಬುವರು ದೂರು ನೀಡಿದ್ದರು.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.












