ಇತ್ತೀಚಿನ ಸುದ್ದಿ
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಪರಿಸರ ದಿನಾಚರಣೆ: ಬೈರಾಡಿಕೆರೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ
08/06/2026, 10:12
ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನಚಾರಣೆ ಪ್ರಯುಕ್ತ ಸಂಘದ ಪ್ರಧಾನ ಕಚೇರಿಯ ಬಳಿಯಿರುವ ಬೈರಾಡಿಕೆರೆಯ ವ್ಯಾಪ್ತಿಯಲ್ಲಿ ಸಸಿನೆಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು.
ವಿಶ್ವ ಪರಿಸರ ದಿನಚಾರಣೆಯನ್ನು ಪರಿಸರ ಪ್ರೇಮಿ ಶ್ರೀ ಮಾಧವ ಉಳ್ಳಾಲ ರವರ ಮಾರ್ಗದರ್ಶನದಲ್ಲಿ ಬೈರಾಡಿಕೆರೆಯ ಸುತ್ತಮುತ್ತ ಸಸಿನೆಡುವ ಮೂಲಕ ಆಚರಿಸಲಾಯಿತು.
ಬೈರಾಡಿಕೆರೆ ಸಂರಕ್ಷಣಾ ಹಾಗೂ ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಕಾರ್ಯಕ್ರಮಗಳನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ನೇತೃತ್ವದಲ್ಲಿ ಹಮ್ಮಿಕೊಂಡು ಬರುತ್ತಿದೆ. ಈ ಬಾರಿ ಸಂಘವು ವಿಶ್ವ ಪರಿಸರ ದಿನಚಾರಣೆಯನ್ನು ಬೈರಾಡಿಕೆರೆಯ ಸುತ್ತಮುತ್ತ ಸಸಿನೆಡುವ ಮೂಲಕ ಆಚರಿಸಿರುವುದು ನಮಗೆಲ್ಲರಿಗೂ ತುಂಬಾ ಸಂತಸದ ವಿಷಯವಾಗಿದೆ. ಬೈರಾಡಿಕೆರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮುಂದಿನ ದಿನಗಳಲ್ಲಿ ನಮ್ಮೊಂದಿಗೆ ಕೈ ಜೋಡಿಸಬೇಕೆಂದು ವಿನಂತಿಸಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ “ಸಂಘದ ವತಿಯಿಂದ ಕಳೆದ 14 ವರ್ಷಗಳಿಂದ ಸಂಘದ ವತಿಯಿಂದ ವಿಶ್ವ ಪರಿಸರ ದಿನಚಾರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಹಿಂದೆ ವಿಶ್ವ ಪರಿಸರ ದಿನದಂದು ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಸಸಿಗಳನ್ನು ನೆಡಲಾಗಿದೆ. ಅಲ್ಲದೇ ಸಂಘದ ಪ್ರಧಾನ ಕಚೇರಿಯ ಆವರಣದಲ್ಲಿ ಸಸಿಗಳನ್ನು ನೆಟ್ಟು, ಪೋಷಿಸುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷ ವಿಶ್ವ ಪರಿಸರ ದಿನಚಾರಣೆಯನ್ನು ಬೈರಾಡಿಕೆರೆ ಸಂರಕ್ಷಣಾ ಮತ್ತು ಅಭಿವೃದ್ದಿ ಸಮಿತಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಆಯೋಜನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಬೈರಾಡಿಕೆರೆಯ ಸ್ವಚ್ಚತೆಯನ್ನು ಕಾಪಾಡುವಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳೊಂದಿಗೆ ನಿರಂತರವಾಗಿ ಕೈ ಜೋಡಿಸಲಾಗುವುದು ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಮಂಗಳೂರು ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಇಂಜಿನಿಯರ್ ಶ್ರೀ ದಯಾನಂದ ಪೂಜಾರಿ, ಶ್ರೀ ಸಯ್ಯದ್, ಬೈರಾಡಿಕೆರೆ ಸಂರಕ್ಷಣಾ ಹಾಗೂ ಅಭಿವೃದ್ದಿ ಸಮಿತಿಯ ಪದಾಧಿಕಾರಿಗಳಾದ ಶ್ರೀ ಅನಿಲ್ ಕೆಂಬಾರ್, ಶ್ರೀ ಸಂತೋಷ್ ಶೆಟ್ಟಿ, ಶ್ರೀ ಸುರೇಶ್ ಆಚಾರ್, ಶ್ರೀ ವಿಕ್ಕಿ ಪೂಜಾರಿ ಮತ್ತಿತ್ತರರು, ಹಾಗೂ ಮಡಿಲು ಸೇವಾ ತಂಡ ಪಡೀಲು ಇದರ ಗೌರವಾಧ್ಯಕ್ಷರಾದ ಶ್ರೀಮತಿ ಪುಷ್ಪಲತಾ, ಅಧ್ಯಕ್ಷರಾದ ಶ್ರೀ ಗಜೇಂದ್ರ, ಕರ್ನಾಟಕ ಟೈಲರ್ ಅಸೋಷಿಯನ್‌ನ ರಾಜ್ಯ ಸಮಿತಿಯ ಕೋಶಾಧಿಕಾರಿಯಾಗಿರುವ ಶ್ರೀ ಪ್ರಜ್ವಲ್ ಕುಮಾರ್, ಮಂಗಳೂರು ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ರೈ, ಸ್ಥಳೀಯ ಸಂಘ – ಸಂಸ್ಥೆಗಳ ಪಧಾಧಿಕಾರಿಗಳು ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.












