9:27 PM Monday8 - June 2026
ಬ್ರೇಕಿಂಗ್ ನ್ಯೂಸ್
ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ…

ಇತ್ತೀಚಿನ ಸುದ್ದಿ

ಫೋಕ್ಸೋ ಪ್ರಕರಣ: ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್

08/06/2026, 20:24

ಬೆಂಗಳೂರು(reporterkarnataka.com): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ  ಅವರಿಗೆ ಕರ್ನಾಟಕ ಹೈಕೋರ್ಟ್‌ ರಿಲೀಫ್ ನೀಡಿದೆ.
ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಈ ಸಡಿಲಿಕೆ ಸಿಕ್ಕಿರುವುದರಿಂದ ಯಡಿಯೂರಪ್ಪ ಅವರು ಯಾವುದೇ ಕಾನೂನಾತ್ಮಕ ಅಡೆತಡೆ ಅಥವಾ ಮುಂಚಿತ ಅನುಮತಿಯ ಕಿರಿಕಿರಿ ಇಲ್ಲದೇ ಮುಕ್ತವಾಗಿ ದೇಶಾದ್ಯಂತ ಪ್ರವಾಸ ಕೈಗೊಳ್ಳಬಹುದಾಗಿದೆ.

*ಮುಖ್ಯಾಂಶಗಳು:*
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೊಕ್ಸೊ ಕೇಸ್
ಜಾಮೀನು ಷರತ್ತು ಸಡಿಲಿಕೆ ಕೋರಿ ಬಿಎಸ್ ಯಡಿಯೂರಪ್ಪ ಮನವಿಯನ್ನು ಪುರಸ್ಕರಿಸಿದ ಕೋರ್ಟ್​
ಜಾಮೀನು ಸಂದರ್ಭದಲ್ಲಿ ಕೋರ್ಟ್ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ಷರತ್ತು ವಿಧಿಸಲಾಗಿತ್ತು.
ಇದೀಗ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ ಷರತ್ತು ಸಡಿಲಿಸಿದ ಹೈಕೋರ್ಟ್
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದಾಖಲಾಗಿರುವ ಫೋಕ್ಸೋ ಪ್ರಕರಣ ಸಂಬಂಧ ಜಾಮೀನು ನೀಡುವ ಸಂದರ್ಭದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತು ಸಡಿಲಗೊಳಿಸಬೇಕೆಂದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ವಿಚಾರಣೆ ನಡೆಸಿದ ಕೋರ್ಟ್, ಯಡಿಯೂರಪ್ಪನವರಿಗೆ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಲಾಗಿದ್ದ ಷರತ್ತು ಸಡಿಲಿಕೆ ಮಾಡಿ ಆದೇಶಿಸಿದೆ.

*ಪ್ರಕರಣದ ಹಿನ್ನೆಲೆ:*
2024ರ ಫೆಬ್ರವರಿ 2ರಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ಮಾರ್ಚ್ 14, 2024ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಳೆಯ ಲೈಂಗಿಕ ದೌರ್ಜನ್ಯ ಪ್ರಕರಣವೊಂದಕ್ಕೆ ನ್ಯಾಯ ಒದಗಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ಅವರನ್ನು ಭೇಟಿಯಾಗಲು ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರು ದಾಖಲಾದ ನಂತರ ಈ ಪ್ರಕರಣವನ್ನು ಸಿಐಡಿ (CID) ತನಿಖೆಗೆ ವಹಿಸಲಾಗಿದ್ದು, ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದ್ದು, ಈಗಾಗಲೇ ಕೋರ್ಟ್ ಸಹ ಜಾಮೀನು ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು