5:16 PM Tuesday9 - June 2026
ಬ್ರೇಕಿಂಗ್ ನ್ಯೂಸ್
ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ಖಾಸಗಿ ಬಸ್ ಟಿಕೆಟ್ ದರ ಶೇ. 5ರಿಂದ 8ರಷ್ಟು ಏರಿಕೆ: ವಿದ್ಯಾರ್ಥಿಗಳಿಗೆ ವಿನಾಯಿತಿ

09/06/2026, 16:26

ಉಡುಪಿ(reporterkarnataka.com): ರಾಜ್ಯದ ಪ್ರಯಾಣಿಕರಿಗೆ ಇಂದಿನಿಂದಲೇ ಅನ್ವಯವಾಗುವಂತೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಇಂದಿಗೆ ಜಾರಿಗೆ ಬರುವಂತೆ ರಾಜ್ಯಾದ್ಯಂತ ಸಂಚರಿಸುವ ಖಾಸಗಿ ಸ್ಟೇಜ್ ಬಸ್‌ಗಳ ಪ್ರಯಾಣ ದರವನ್ನು ಶೇಕಡಾ 5 ರಿಂದ 8ರಷ್ಟು ಹೆಚ್ಚಳ ಮಾಡಲಾಗಿದೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಖಾಸಗಿ ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕೆ. ಸುರೇಶ್ ನಾಯಕ್ ಅವರು ಈ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ನಿರಂತರವಾಗಿ ಹೆಚ್ಚುತ್ತಿರುವ ವೆಚ್ಚಗಳ ಕಾರಣದಿಂದಾಗಿ ಬಸ್ ಉದ್ಯಮವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಪ್ರಯಾಣ ದರ ಪರಿಷ್ಕರಣೆ ಮಾಡುವುದು ಅನಿವಾರ್ಯವಾಗಿದೆ ಎಂದು ಬಸ್ ಮಾಲೀಕರು ತಿಳಿಸಿದ್ದಾರೆ.

*ದರ ಏರಿಕೆಗೆ ಕಾರಣಗಳೇನು?:*
ಸುರೇಶ್ ನಾಯಕ್ ಅವರು ದರ ಏರಿಕೆಗೆ ಈ ಪ್ರಮುಖ ಕಾರಣಗಳನ್ನು ನೀಡಿದ್ದಾರೆ:
*ಡೀಸೆಲ್ ದರ ಏರಿಕೆ:* ಕಳೆದ ಕೆಲವು ವರ್ಷಗಳಿಂದ ಮಾರುಕಟ್ಟೆಯಲ್ಲಿ ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿರುವುದು ಬಸ್ ಮಾಲೀಕರಿಗೆ ದೊಡ್ಡ ಹೊರೆಯಾಗಿದೆ.
*ವಾಹನ ನಿರ್ವಹಣಾ ವೆಚ್ಚ:* ಟೈರ್, ವಿವಿಧ ಬಿಡಿಭಾಗಗಳು ವಾಹನ ದುರಸ್ತಿ ಹಾಗೂ ದೈನಂದಿನ ಮೇಂಟೆನೆನ್ಸ್ ವೆಚ್ಚಗಳು ಭಾರೀ ಪ್ರಮಾಣದಲ್ಲಿ ಗಗನಕ್ಕೇರಿವೆ.
*ನೌಕರರ ವೇತನದ ಒತ್ತಡ:* ಬಸ್ ಸಿಬ್ಬಂದಿ ಹಾಗೂ ನೌಕರರ ವೇತನ ಹೆಚ್ಚಳದ ಒತ್ತಡವೂ ಈ ನಿರ್ಧಾರಕ್ಕೆ ಪ್ರಮುಖ ಕಾರಣವಾಗಿದೆ.
ರಾಜ್ಯ ಸರ್ಕಾರದ 2020ರ ಅಧಿಸೂಚನೆ ಅನ್ವಯವೇ ಈ ದರ ಹೆಚ್ಚಳಕ್ಕೆ ಅಧಿಕೃತ ಅನುಮೋದನೆ ದೊರೆತಿದ್ದು, ಇಂದಿನಿಂದಲೇ (ಜೂನ್ 9) ಹೊಸ ಪರಿಷ್ಕೃತ ದರ ಜಾರಿಗೆ ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ನಿರ್ಧಾರದಿಂದಾಗಿ ಖಾಸಗಿ ಬಸ್ ನೆಚ್ಚಿಕೊಂಡಿರುವ ಸಾರ್ವಜನಿಕರ ಜೇಬಿಗೆ ಕತ್ತರಿ ಬೀಳಲಿದ್ದು, ದೈನಂದಿನ ಖರ್ಚು ಮತ್ತಷ್ಟು ಹೆಚ್ಚಾಗಲಿದೆ.

*ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಇಲ್ಲ ‘ದರ ಏರಿಕೆ’ ಬಿಸಿ!:*
ಸಾಮಾನ್ಯ ಪ್ರಯಾಣಿಕರ ಟಿಕೆಟ್ ದರ ಹೆಚ್ಚಳವಾಗಿದ್ದರೂ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಒಂದು ನಿರಾಳ ಸುದ್ದಿ ಸಿಕ್ಕಿದೆ. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಪ್ರಸಕ್ತ ಪ್ರಯಾಣ ದರ ರಿಯಾಯಿತಿಗಳು ಯಾವುದೇ ಬದಲಾವಣೆ ಇಲ್ಲದೆ ಎಂದಿನಂತೆ ಮುಂದುವರಿಯಲಿವೆ ಎಂದು ಬಸ್ ಮಾಲೀಕರ ಒಕ್ಕೂಟ ಸ್ಪಷ್ಟ ಭರವಸೆ ನೀಡಿದೆ. ಹೀಗಾಗಿ ವಿದ್ಯಾರ್ಥಿಗಳ ಮೇಲೆ ಯಾವುದೇ ರೀತಿಯ ಹೆಚ್ಚುವರಿ ಹೊರೆ ಬೀಳುವುದಿಲ್ಲ.ಈ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್, ಸದಾನಂದ ಛಾತ್ರ ಸೇರಿದಂತೆ ಉದ್ಯಮದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು