1:38 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಬ್ರೇಕ್ ಬದಲು ಎಕ್ಸಿಲೇಟರ್ ಒತ್ತಿದ ಮಹಿಳೆ: ಕಾರು ಹರಿದು ವಿದ್ಯುತ್ ಗುತ್ತಿಗೆದಾರ ದುರಂತ ಸಾವು

10/06/2026, 13:12

ಹಾವೇರಿ(reporterkarnataka.com): ಮಹಿಳೆಯೊಬ್ಬರು ಕಾರು ನಿಲ್ಲಿಸುವಾಗ ಬ್ರೇಕ್ ಬದಲು ಎಕ್ಸಿಲೇಟರ್ ಒತ್ತಿದ ಪರಿಣಾಮ ಎದುರಿಗಿದ್ದ ವ್ಯಕ್ತಿ ಮೇಲೆ ಕಾರು ಹರಿದು ದುರ್ಮರಣ ಹೊಂದಿದ ಘಟನೆ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ನಡೆದಿದೆ.
ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಅಜ್ಜಪ್ಪ ಶಿವಪ್ಪ ಕಳಸಣ್ಣನವರ (40) ಮೃತ ದುರ್ದೈವಿ. ಬೆಂಗಳೂರಿನ ಸುಜಾತಾ ಕೆ.ಎಂ. ಕಾರು ಹಾಯಿಸಿದ ಮಹಿಳೆ. ಅಜ್ಜಪ್ಪ ವಿದ್ಯುತ್ ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದ. ಸುಜಾತಾಳ ಜಮೀನಿನಲ್ಲಿ ವಿದ್ಯುತ್ ಪರಿವರ್ತಕದ ಕೆಲಸವಿದ್ದ ಕಾರಣ ಅವರ ಜಮೀನಿನ ಬಳಿ ಕೆಲಸ ಮಾಡುತ್ತಿದ್ದರು. ಈ ಸಮಯದಲ್ಲಿ ಕಾರಿನಲ್ಲಿ ಬಂದ ಸುಜಾತಾ ಅಜ್ಜಪ್ಪನನ್ನು ಮಾತನಾಡಿಸುವ ಸಲುವಾಗಿ ಕಾರು ನಿಲ್ಲಿಸಲು ಮುಂದಾದಾಗ ಬ್ರೇಕ್ ಬದಲು ಎಕ್ಸಿಲೇಟರ್ ಒತ್ತಿದ್ದಾಳೆ. ಇದರಿಂದ ಕಾರು ಎದುರಿಗೆ ನಿಂತಿದ್ದ ಅಜ್ಜಪ್ಪನ ಮೈ ಮೇಲೆ ಹರಿದಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಆತನನ್ನು ಚಿಕಿತ್ಸೆಗಾಗಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗುತ್ತಿತ್ತು. ಆದರೆ, ದಾರಿ ಮಧ್ಯೆಯೆ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು