6:54 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬ್ರಹ್ಮಾವರ: ತಾಯಿಯ ಕಂಕುಳಿನಲ್ಲಿದ್ದ ಮಗು ಮೇಲೆ ತೆಂಗಿನ ಕಾಯಿ ಬಿದ್ದು ದಾರುಣ ಸಾವು

11/06/2026, 11:13

ಬ್ರಹ್ಮಾವರ(reporterkarnataka.com): ತಾಯಿಯ ಕಂಕುಳಿನಲ್ಲಿದ್ದ ಮಗುವಿನ ಮೇಲೆ ನೇರವಾಗಿ ತೆಂಗಿನ ಕಾಯಿ ಬಿದ್ದು ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಘಟನೆ ಬ್ರಹ್ಮಾವರದ ಹೆರಂಜೆಯಲ್ಲಿ ಸಂಭವಿಸಿದೆ.
ತಾಯಿಯು ಎಂದಿನಂತೆ 6 ವರ್ಷ ಪ್ರಾಯದ ದೊಡ್ಡ ಮಗುವನ್ನು ಶಾಲೆಗೆ ಬಿಡಲು ಹೊರಟಿದ್ದರು, ಈ ವೇಳೆ ಸಣ್ಣ ಮಗುವನ್ನು ಕೂಡ ಎತ್ತಿಕೊಂಡು ತಾಯಿ ಹೊರಟು ಸ್ವಲ್ಪ ದೂರ ಸಾಗುವಷ್ಟರಲ್ಲಿ ದಾರಿ ಬದಿಯಲ್ಲಿದ್ದ ತೆಂಗಿನ ತೋಟದಲ್ಲಿದ್ದ ಮರದಿಂದ ಅಚಾನಕ್‌ ಆಗಿ ತೆಂಗಿನ ಕಾಯಿ ನೇರವಾಗಿ ಮಗುವಿನ ತಲೆಗೆ ಬಿತ್ತು. ಕೂಡಲೇ ಸ್ಥಳೀಯರು ಸೇರಿ ಮಗುವನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದರು. ತಲೆಗೆ ಗಂಭೀರ ಏಟು ಆಗಿದ್ದರಿಂದ ಕೂಡಲೇ ಶಸ್ತ್ರ ಚಿಕಿತ್ಸೆ ನಡೆಸಿದರೂ ಮಗುವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸಂಜೆಯ ವೇಳೆಗೆ ಮಗು ಕೊನೆಯುಸಿರೆಳೆಯಿತು.

*ಸ್ಥಳೀಯರ ಪ್ರಯತ್ನ:*
ಮಗುವಿನ ಮೇಲೆ ತೆಂಗಿನ ಕಾಯಿ ಬಿದ್ದ ಸುದ್ದಿ ತಿಳಿದಾಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರು. ಪಕ್ಕದ ಮನೆಯ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಸ್ಥಳೀಯ ವ್ಯಕ್ತಿ ಮಗುವಿನ ಉಸಿರಾಟಕ್ಕೆ ನೆರವಾಗುವಂತೆ ಸಿಪಿಆರ್‌ ಮಾಡುತ್ತಾ ಸಾಗಿದರು. ಆಸ್ಪತ್ರೆಗೆ ತಲುಪುವವರೆಗೆ ಮಗು ಕಣ್ಣು ಬಿಟ್ಟು ಆಚೀಚೆ ನೋಡುತ್ತಿತ್ತು ಎಂದು ಮನೆಯವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು