2:50 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ

11/06/2026, 11:20

ಹಾಸನ(repoeterkarnataka.com): ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಆದರೆ, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ಸಾರ್ವಜನಿಕರನ್ನು ಒಂದೆಡೆ ಆತಂಕಕ್ಕೆ, ಮತ್ತೊಂದೆಡೆ ತಮಾಷೆಯ ಕುತೂಹಲಕ್ಕೆ ಈಡುಮಾಡುವ ಅಪರೂಪದ ಘಟನೆಯೊಂದು ನಡೆದಿದೆ. ಗುಂಪಿನಿಂದ ಬೇರ್ಪಟ್ಟಿರುವ ಕಾಡಾನೆ ಮರಿಯೊಂದು ರಸ್ತೆಯಲ್ಲಿದ್ದ ಹಸುವಿನ ಕರುಗಳನ್ನು ಅಟ್ಟಾಡಿಸಿಕೊಂಡು ಹೋಗಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಲ್ಲಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ದಟ್ಟವಾದ ಕಾಫಿ ತೋಟಗಳಿವೆ. ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯವಾಗಿದೆ. ಆನೆಗಳ
ಗುಂಪಿನಿಂದ ಬೇರ್ಪಟ್ಟಿದ್ದ ಒಂಟಿ ಕಾಡಾನೆ ಮರಿಯೊಂದು, ಒಂದು ಕಾಫಿ ತೋಟದಿಂದ ರಸ್ತೆ ದಾಟಿ ಮತ್ತೊಂದು ಕಾಫಿ ತೋಟಕ್ಕೆ ಹೋಗಲು ಯತ್ನಿಸುತ್ತಿತ್ತು. ಇದೇ ಸಮಯದಲ್ಲಿ ಕಲ್ಲಹಳ್ಳಿ ಗ್ರಾಮದ ಲಿಂಕ್ ರಸ್ತೆಯಲ್ಲಿ ಕರುಗಳು ಸಾಗುತ್ತಿದ್ದವು. ರಸ್ತೆಯಲ್ಲಿ ಕರುಗಳು ಎದುರಾಗುತ್ತಿದ್ದಂತೆಯೇ ಮರಿಯಾನೆ ಜೋರಾಗಿ ಕೂಗುತ್ತಾ ಅವುಗಳ ಕಡೆಗೆ ನುಗ್ಗಿದೆ. ಮರಿಯಾನೆಯ ಹಠಾತ್ ಆರ್ಭಟ ಹಾಗೂ ಓಟಕ್ಕೆ ಹೆದರಿದ ಕರುಗಳು ಜೀವ ಉಳಿಸಿಕೊಳ್ಳಲು ರಸ್ತೆಯುದ್ದಕ್ಕೂ ಓಡಲಾರಂಭಿಸಿವೆ. ಮರಿಯಾನೆ ಸುಮ್ಮನಾಗದೆ ಸತತ ಎರಡು ಬಾರಿ ಕರುಗಳನ್ನುಅಟ್ಟಾಡಿಸಿದೆ. ಈ ಮರಿಯಾನೆಯ ತುಂಟಾಟ ಹಾಗೂ ಓಡಾಟದ ಸಂಪೂರ್ಣ ದೃಶ್ಯವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು