2:14 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣ: ಗೋವಾದಲ್ಲಿ ಸಿಕ್ಕಿಬಿದ್ದ ಬಿಹಾರದ ಆರೋಪಿ

12/06/2026, 19:10

ಮಂಗಳೂರು(reporterkarnataka.com): ಮಂಗಳೂರಿನ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣವೊಂದರ ಪ್ರಮುಖ ಆರೋಪಿಯನ್ನು ಗೋವಾ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಚಲನವಲನದ ಬಗ್ಗೆ ಮಾಹಿತಿ ಸಿಕ್ಕ ಕೆಲವೇ ಗಂಟೆಗಳಲ್ಲಿ ಪೊಲೀಸರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರದ ದರ್ಬಾಂಗ ಜಿಲ್ಲೆಯ ಶಿವಾಜಿನಗರ ನಿವಾಸಿ ಪ್ರಶಾಂತ್ ಕುಮಾರ್ ಭಂಡಾರಿ (36) ಎಂದು ಗುರುತಿಸಲಾಗಿದೆ.
ಮಂಗಳೂರಿನಲ್ಲಿ ಕೊಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ಪ್ರಶಾಂತ್, ಹಜರತ್ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲಿನ ಮೂಲಕ ಗೋವಾಕ್ಕೆ ಪಲಾಯನ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮಂಗಳೂರು ಪೊಲೀಸರಿಗೆ ಸಿಕ್ಕಿತ್ತು. ಕರ್ನಾಟಕದ ಉನ್ನತಾಧಿಕಾರಿಗಳು ತಕ್ಷಣವೇ ಈ ತಾಂತ್ರಿಕ ಮಾಹಿತಿಯನ್ನು ಗೋವಾ ಪೊಲೀಸರಿಗೆ ರವಾನಿಸಿ ಅಲರ್ಟ್ ಮಾಡಿದ್ದರು.ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ದಕ್ಷಿಣ ಗೋವಾದ ಕೊಂಕಣ ರೈಲ್ವೆ ಪೊಲೀಸ್ ಠಾಣೆಯ ಸಿಬ್ಬಂದಿ, ಮಡಗಾಂವ್ (Margao) ರೈಲ್ವೆ ನಿಲ್ದಾಣ ಹಾಗೂ ಸುತ್ತಮುತ್ತಲಿನ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಜಾಗ್ರತೆ ವಹಿಸಿದರು. ರೈಲು ನಿಲ್ದಾಣಕ್ಕೆ ಬಂದು ತಲುಪುತ್ತಿದ್ದಂತೆ ಸಿಸಿಟಿವಿ ಕಣ್ಗಾವಲು, ತಾಂತ್ರಿಕ ವಿಶ್ಲೇಷಣೆ ಮತ್ತು ಗುಪ್ತಚರ ಮಾಹಿತಿಯ ನೆರವಿನಿಂದ ಶಂಕಿತ ವ್ಯಕ್ತಿಯನ್ನು ನಿಖರವಾಗಿ ಗುರುತಿಸಿದ ಪೊಲೀಸರು ಆತನನ್ನು ಸುತ್ತುವರೆದು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು