11:54 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪರಿಸರ ಸಂರಕ್ಷಣೆಯ ಮನೋಭಾವ ಬೆಳೆಸುವಲ್ಲಿ ಎನ್ನೆಸ್ಸೆಸ್ ಮಹತ್ವದ ವೇದಿಕೆ: ಲೋಲಾಕ್ಷಿ ಫೆರ್ನಾಂಡಿಸ್

13/06/2026, 20:59

ಮಂಗಳೂರು(reporterkarnataka.com): ಪರಿಸರ ಸಂರಕ್ಷಣೆಯ ಮನೋಭಾವವನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್ ಮಹತ್ವದ ವೇದಿಕೆಯಾಗಿದೆ ಎಂದು ಪೃಥ್ವಿ ಸ್ವಯಂಸೇವಕರು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷೆ ಲೋಲಾಕ್ಷಿ ಫೆರ್ನಾಂಡಿಸ್ ಹೇಳಿದ್ದಾರೆ.
ಪಾದುವ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ 2026–27ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಕೃತಿಯು ನಮಗೆ ನೀರು, ಗಾಳಿ ಮತ್ತು ಬೆಳಕನ್ನು ಉಚಿತವಾಗಿ ನೀಡುತ್ತದೆ. ನಾವು ಪ್ರಕೃತಿಗೆ ಮರಳಿ ಏನನ್ನು ನೀಡುತ್ತಿದ್ದೇವೆ ಎಂಬ ಚಿಂತನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದರು.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪಾದುವ ಶಿಕ್ಷಣ ಸಂಸ್ಥೆಯ ಕ್ಯಾಂಪಸ್ ನಿರ್ದೇಶಕ ರೆ. ಫಾ. ಅರುಣ್ ವಿಲ್ಸನ್ ಲೋಬೋ, ಸಮಾಜ ಸೇವೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಕಾಳಜಿಯನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ರೋಷನ್ ವಿನ್ಸಿ ಸಂತುಮಯೋರ್, ಮಾತನಾಡಿ, ಎನ್‌ಎಸ್‌ಎಸ್ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದ್ದು, ಸಮಾಜಮುಖಿ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವವನ್ನು ಬೆಳೆಸುತ್ತದೆ ಎಂದು ಹೇಳಿದರು.

ಸಹ ಯೋಜನಾಧಿಕಾರಿ ಅನಿಲ್ ಡಿಮೆಲ್ಲೊ, ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಹಯೋಜನಾಧಿಕಾರಿ ಲೊರೆಟ್ಟಾ ಆಂಥೋನಿ, ಎನ್‌ಎಸ್‌ಎಸ್ ಘಟಕದ ನಾಯಕ ಶ್ರವಣ್ ಕುಮಾರ್ ಹಾಗೂ ನಾಯಕಿ ಸ್ಫೂರ್ತಿ ಉಪಸ್ಥಿತರಿದ್ದರು.
ಎನ್‌ಎಸ್‌ಎಸ್ ಯೋಜನಾಧಿಕಾರಿ ಯತಿರಾಜ್* ಸ್ವಾಗತಿಸಿದರು. ಸ್ವಯಂಸೇವಕ ಆಕಾಶ್ ವಂದಿಸಿದರೆ, ಸ್ವಯಂಸೇವಕಿ ತನಿಸಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು