1:14 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

14/06/2026, 17:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com
ಮೊನ್ನೆ ದಿನ ಕುಶಾಲನಗರದ ರಸೂಲ್ ಲೇಔಟ್ ಬಳಿ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿ ಜಲ ಸಮಾಧಿ ಆಗಿದ್ದ ನಾಗಾಲ್ಯಾಂಡ್ ಮೂಲದ ಯುವಕನ ಮೃತ ದೇಹ ಇಂದು ಪತ್ತೆ ಆಗಿದೆ. ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ಮುಳುಗು ತಜ್ಞರು ಇಂದು ಕೂಡ ಕಾರ್ಯಾಚರಣೆಯನ್ನು ಮುಂದುವರೆಸಿ ಮುತ್ತಿನ ಮುಳ್ಳುಸೋಗೆ ಬಳಿ ಹರಿಯುತಿರುವ ಕಾವೇರಿ ನದಿಯಲ್ಲಿ ಗಿಡಗಳ ನಡುವೆ ಸಿಲುಕಿಕೊಂಡಿದ್ದ ಯುವಕನ ಮೃತ ದೇಹವನ್ನು ಪತ್ತೆಹಚ್ಚುವಲ್ಲಿ ಯಶಸ್ವಿ ಯಾಗಿದ್ದಾರೆ.
ಕುಶಾಲನಗರದ ಹೋಟೆಲ್ ಒಂದರಲ್ಲಿ ಕೆಲಸ‌ ನಿರ್ವಹಿಸುತ್ತಿದ್ದ
ನಾಗಾಲಾಂಡ್ ರಾಜ್ಯದ ಲಾಂಗ್ ಟಕ್ ಕೊನ್ಯಕ್ ಮತ್ತು ಹಾಂಗ್ ಕಪ್ ಕೊನ್ಯಕ್ ಎಂಬ ಇಬ್ಬರು ಯುವಕರು ಹಾಗೂ ಓರ್ವ ಯುವತಿ ಮೊನ್ನೆ ಸಂಜೆ ಕುಶಾಲನಗರ ರಸೂಲ್ ಲೇಔಟ್ ಬಳಿ ನದಿಯತ್ತ ತೆರಳಿದ್ದರು. ಇವರ ಪೈಕಿ ಇಬ್ಬರು ಯುವಕರು ನದಿಗಿಳಿದಿದ್ದಾರೆ. ಈ ಸಂದರ್ಭ ಆಳವಾದ ಗುಂಡಿಯಲ್ಲಿ ಮುಳುಗಿ ಯುವಕರು ಜಲ ಸಮಾಧಿ ಆಗಿದ್ದರು. ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು