3:15 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ | ಜೈಪುರದಲ್ಲಿ ಪ್ರತಿಭಟನೆ ವೇಳೆ CJP ಸಂಸ್ಥಾಪಕ ದೀಪ್ಕೆ ಮೇಲೆ ಹಲ್ಲೆ

15/06/2026, 22:06

ಜೈಪುರ(reporterkarnataka.com): ಸೋಷಿಯಲ್ ಮೀಡಿಯಾ ಇತ್ತೀಚೆಗೆ ಭಾರೀ ಸದ್ದು ಮಾಡಿದ್ದ ನೂತನ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಸಂಸ್ಥಾಪಕ ಅಭಜಿತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆದಿದೆ. ರಾಜಸ್ಥಾನದ ಜೈಪುರದಲ್ಲಿ ಸಾರ್ವಜನಿಕ ಸಂವಾದ ನಡೆಸುವಾಗ ಸೋಮವಾರ (ಜೂನ್ 15) ವೇಳೆ ಅವರನ್ನು ಥಳಿಸಿದ ಘಟನೆ ನಡೆದಿದೆ. ಶೈಕ್ಷಣಿಕ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಕೇಂದ್ರದ ವಿರುದ್ಧ ಧ್ವನಿ ಎತ್ತಿರುವ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ರಾಜಸ್ಥಾನದ ಜೈಪುರದಲ್ಲಿ ಸಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.



ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಧಿಕ್ಕಾರ ಕೂಗುತ್ತಿದ್ದರು. ಈ ವೇಳೆ ಸಾರ್ವಜನಿಕ ಸಂವಾದ ನಡೆಸುತ್ತಿದ್ದ ಅಭಿಜೀತ್ ದೀಪ್ಕೆ ಅವರನ್ನು ಹೆಗಲ ಮೇಲೆ ಹೊತ್ತು ಜನರ ಗುಂಪಿನ ನಡುವೆ ಕರೆದೊಯ್ಯಲಾಗುತ್ತಿತ್ತು. ದೀಪ್ಕೆ ಸಹ ಸಾರ್ವಜನಿಕರತ್ತ ಕೈ ಬೀಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಕೆಲವರು ಅಭಿಜಿತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಮುಖ, ಮೈ, ತಲೆಗೆ ಹೊಡೆಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು