1:40 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3 ಮಂದಿ ಸಾವು

16/06/2026, 19:09

ವಿಜಯಪುರ(reporterkarnataka.com): ಟಿಪ್ಪರ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ನಡೆದಿದೆ. ಅಪಘಾತದ ತೀವ್ರತೆಗೆ ಟಿಪ್ಪರ್ ಚಾಲಕ ಅಶೋಕ್ ಉಟಗಿ , ಅವರ ಪತ್ನಿ ರಾಧಾಬಾಯಿ ಉಟಗಿ ಹಾಗೂ ಸರ್ಕಾರಿ ಬಸ್ ಚಾಲಕ ಹನುಮಂತ ಛಲವಾದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಟಿಪ್ಪರ್ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಚಡಚಣ ಪೊಲೀಸ್ ಠಾಣೆಯ ಪಿಎಸ್‌ಐ ಸೋಮೇಶ್ ಗೆಜ್ಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು