6:43 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

16/06/2026, 20:48

ಬೆಂಗಳೂರು(reporterkarnataka.com): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪಬ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿದ್ದು, ಏಳು ಮಂದಿಗೆ ಗಾಯಗಳಾಗಿವೆ. ಇದರ ಬೆನ್ನಲ್ಲೆ ನಗರಾದ್ಯಂತ ಅನೇಕ ಪಬ್, ಬಾರ್, ರೆಸ್ಟೋರೆಂಟ್‌ಗಳು ಪರವಾನಿಗೆ ಇಲ್ಲದೇ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಬ್ ನಲ್ಲಿ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲಾಗಿದೆ. ಪಬ್ ಮಾಲೀಕನ ವಿರುದ್ಧ ದೂರು ದಾಖಲಿಸಲಾಗಿದೆ. ಪರಾವನಿಗೆ ಪಡೆಯದೇ ಈ ರೀತಿಯ ಅವಘಡಕ್ಕೆ ಕಾರಣರಾದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು.
ಪೊಲೀಸರ ತನಿಖೆಗೆ ವೇಳೆ ಯಾವುದೇ ಲೈಸನ್ಸ್ ಇಲ್ಲದೆ ಪಬ್ ನಡೆಸಲಾಗುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ. ಮೈಸೂರಿನಲ್ಲಿ ಅನೇಕ ಪಬ್ ಬಾರ್ ಅಂಡ್ ರೆಸ್ಟೋರೆಂಟ್ ಗಳು ಲೈಸನ್ಸ್ ಪಡೆಯದೇ ನಡೆಸುತ್ತಿರುವ ವಿಚಾರ ಗೊತ್ತಾಗಿದೆ. ಇದೇ ವಿಚಾರವಾಗಿ ನಾನು ಅಬಕಾರಿ ಡಿಸಿಗೆ ಸೂಕ್ತ ಕ್ರಮ ಜರುಗಿಸುವಂತೆ ಸೂಚನೆ ಕೊಟ್ಟಿದ್ದೇನೆ ಎಂದು ಅವರು ತಿಳಿಸಿದರು.

*ಮೈಸೂರು ಅಕ್ರಮ, ಬಾರ್ ರೆಸ್ಟೋರೆಂಟ್‌ ಮಾಲೀಕರಿಗೆ ನಡುಕ:*
ಮೈಸೂರಿನಲ್ಲಿ ಎಲ್ಲೆಲ್ಲಿ ಅಕ್ರಮವಾಗಿ ಹಾಗೂ ಲೈಸನ್ಸ್ ಇಲ್ಲದೆ ಬಾರ್ ಆಂಡ್ ರೆಸ್ಟೋರೆಂಟ್ ನಡೆಯುತ್ತಿದೆ ಅಂತವುಗಳನ್ನು ಗುರುತಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ನಿರ್ದೇಶಿಸಲಾಗಿದೆ. ಈ ಮೂಲಕ ಅಕ್ರಮ, ನಿಯಮ ಮೀರಿ ಪಬ್, ಬಾರ್ ನಡೆಸುವ ಮಾಲೀಕರಿಗೆ ನಡುಕ ಶುರುವಾಗಿದೆ. ಇನ್ನೂ ಲೈಸನ್ಸ್ ಇಲ್ಲದೆ ಬಾರ್ ನಡೆಸುತ್ತಿದ್ದರೂ ಸಹಿತ ಅಬಕಾರಿ ಡಿಸಿ ಕಣ್ಮುಚ್ಚಿ ಕುಳಿತಿದ್ದರಾ? ಎಂಬ ಪ್ರಶ್ನೆಗೆ ಅವರು, ಅಧಿಕಾರಿಗಳ ಮೇಲೂ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ, ಅದು ನನ್ನ ಗಮನದಲ್ಲಿದೆ. ಅಮಾನತು ಮಾಡುವಂತೆ ಶಿಫಾರಸು ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು