7:09 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕೊಲ್ಲೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ: ದೇವರ ದರ್ಶನ, ವಿಶೇಷ ಪೂಜೆ

16/06/2026, 20:54

ಉಡುಪಿ(reporterkarnataka.com): ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ ದರ್ಶನ ಪಡೆದರು.
ಈ ವೇಳೆ ದೇವಳದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಿಜಯೇಂದ್ರ ಅವರೊಂದಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉಪಸ್ಥಿತರಿದ್ದರು. ದೇವಿ ದರ್ಶನದ ಬಳಿಕ ಮುಖಂಡರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ವಿಜಯೇಂದ್ರ, ಪಕ್ಷದ ಸ್ಥಳೀಯ ಯುವ ನಾಯಕರನ್ನು ಭೇಟಿ ಮಾಡಿ ಸಂಘಟನಾ ಚಟುವಟಿಕೆಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷದ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು