2:54 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೊಡಗು ಮತ್ತು ಕಣ್ಣೂರು ಪ್ರಯಾಣಿಕರ ಗಮನಕ್ಕೆ: ವಿಮಾನ ವೇಳಾಪಟ್ಟಿಯಲ್ಲಿ ಪ್ರಮುಖ ಬದಲಾವಣೆ

17/06/2026, 22:37

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

​ಹೆಚ್ಚುತ್ತಿರುವ ಇಂಧನ ದರ ಹಾಗೂ ಜಾಗತಿಕ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯ ಜನರಿಗೆ ಅತ್ಯಂತ ಹತ್ತಿರವಿರುವ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ವಿಮಾನಗಳ ವೇಳಾಪಟ್ಟಿ ಬದಲಾಗಲಿದೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತು ಇಂಡಿಗೋ ಸಂಸ್ಥೆಗಳು ತಮ್ಮ ಕೆಲವು ದೇಶೀಯ ವಿಮಾನ ಸೇವೆಗಳನ್ನು ಕಡಿತಗೊಳಿಸುತ್ತಿದ್ದು, ಇಂಡಿಗೋ ಸಂಸ್ಥೆಯು ಜುಲೈನಿಂದ ಪ್ರತಿ ದಿನ ಇದ್ದ ದೆಹಲಿ ವಿಮಾನ ಸೇವೆಯನ್ನು ಕಡಿತಗೊಳಿಸಿ ವಾರಕ್ಕೆ ಕೇವಲ 3 ದಿನ ಮಾತ್ರ ನಡೆಸಲು ನಿರ್ಧರಿಸಿದೆ.
ಇನ್ನು ಬೆಂಗಳೂರು ಮಾರ್ಗದಲ್ಲೂ ಕಡಿತವಾಗಿದ್ದು, ದಿನಕ್ಕೆ ಎರಡು ವಿಮಾನಗಳಿದ್ದ ಇಂಡಿಗೋ ಸೇವೆ ಜೂನ್ 15 ರಿಂದ ದಿನಕ್ಕೆ ಕೇವಲ 1 ವಿಮಾನಕ್ಕೆ ಸೀಮಿತವಾಗಲಿದೆ. ಆದಾಗ್ಯೂ, ಜೂನ್ 1ರಂದು ಸ್ಥಗಿತಗೊಂಡಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಬೆಂಗಳೂರು ವಿಮಾನ ಸೇವೆ ಜೂನ್ 23ರಿಂದ ಮತ್ತೆ ಆರಂಭವಾಗಲಿದ್ದು ವಾರಕ್ಕೆ 2 ದಿನ ಸಂಚರಿಸಲಿದೆ.
​ಮಾರ್ಚ್ ತಿಂಗಳಿನಲ್ಲಿ ಜಾಗತಿಕ ಸಂಘರ್ಷಗಳ ಕಾರಣದಿಂದ ಕಣ್ಣೂರು ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆ ಕೇವಲ 5,329 ಕ್ಕೆ ಕುಸಿದಿತ್ತಾದರೂ, ಮೇ ತಿಂಗಳಿನಲ್ಲಿ 87,259 ಕ್ಕೆ ಏರಿಕೆಯಾಗುವ ಮೂಲಕ ಪ್ರಯಾಣಿಕರ ಸಂಖ್ಯೆ ಈಗ ಗಣನೀಯವಾಗಿ ಚೇತರಿಸಿಕೊಳ್ಳುತ್ತಿದೆ. ಬೆಂಗಳೂರು ಮತ್ತು ದೆಹಲಿ ಮಾರ್ಗಗಳ ಕಡಿತದಿಂದಾಗಿ ಮಡಿಕೇರಿ, ವಿರಾಜಪೇಟೆ, ಗೋಣಿಕೊಪ್ಪಲು ಮತ್ತು ಕುಶಾಲನಗರ ಭಾಗದಿಂದ ಕಣ್ಣೂರು ಮೂಲಕ ಪ್ರಯಾಣಿಸುವ ಸಾರ್ವಜನಿಕರು ತಮ್ಮ ಪ್ರಯಾಣವನ್ನು ಯೋಜಿಸುವ ಮುನ್ನ ಹೊಸ ವೇಳಾಪಟ್ಟಿಯನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳುವುದು ಒಳ್ಳೆಯದು.

ಇತ್ತೀಚಿನ ಸುದ್ದಿ

ಜಾಹೀರಾತು