ಇತ್ತೀಚಿನ ಸುದ್ದಿ
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಮನ್ಸ್
19/06/2026, 22:26
ಬೆಂಗಳೂರು(reporterkarnataka.com): ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕರಿಂದ ಅಡ್ಡ ಮತದಾನದ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಶುಕ್ರವಾರ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಬಿ.ವೈ. ವಿಜಯೇಂದ್ರ ಮತ್ತು ಪಕ್ಷದ ಇತರ ನಾಯಕರಿಗೆ ಸಮನ್ಸ್ ನೀಡಿದ್ದಾರೆ ಎಂದು ವರದಿಯಾಗಿದೆ.
“ಬಿಜೆಪಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಅಡ್ಡ ಮತದಾನವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಜೂನ್ 23 ರಂದು ಪಕ್ಷದ ಮುಖ್ಯಸ್ಥರನ್ನು ಭೇಟಿ ಮಾಡಲು ನಾಯಕರಿಗೆ ಸಮನ್ಸ್ ನೀಡಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕರ್ನಾಟಕದಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 7 ಪರಿಷತ್ ಸ್ಥಾನಗಳಲ್ಲಿ ಐದರಲ್ಲಿ ಗೆಲುವನ್ನು ಸಾಧಿಸಿದೆ. ಪ್ರತಿಪಕ್ಷ ಬಿಜೆಪಿ ಎರಡು ಸ್ಥಾನಗಳಲ್ಲಿ ಗೆದ್ದುಕೊಂಡಿತ್ತು.
ಕಾಂಗ್ರೆಸ್ ಒಟ್ಟು 140 ಮತ ಸಿಗುವ ನಿರೀಕ್ಷೆಯಿತ್ತು. ಆದರೆ, 151 ಮತಗಳನ್ನು ಪಡೆದುಕೊಂಡಿದ್ದು, ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ಮಾಡಿರುವುದು ಕಂಡು ಬಂದಿದೆ.












