3:26 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಬೆಂಗಳೂರು ಆರ್ಟ್ಸ್‌ ಆ್ಯಂಡ್ ಕ್ರಾಫ್ಟ್‌ ಕರಕುಶಲ ವಸ್ತುಗಳ ಪ್ರದರ್ಶನ- ಮಾರಾಟ ಮೇಳಕ್ಕೆ ಚಾಲನೆ: ನಟಿ ಚಂದನಾ ಉದ್ಘಾಟನೆ

18/09/2021, 15:47

ಬೆಂಗಳೂರು(reporterkarnataka.com):  ಬೆಂಗಳೂರು ಆರ್ಟ್ಸ್‌ ಆ್ಯಂಡ್ ಕ್ರಾಫ್ಟ್‌ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ನಟಿ ಚಂದನ ರಾಘವೇಂದ್ರ ಶನಿವಾರ ಚಾಲನೆ ನೀಡಿದರು. 


ಕೊರೊನಾ ಸಾಂಕ್ರಮಿಕ ಹಾಗೂ ಲಾಕ್‌ಡೌನ್‌ ನಿಂದ ಮನೆಯಲ್ಲಿಯೇ ಇದ್ದು ಬೋರ್‌ ಆಗಿರುವ ಜನರಿಗೆ ಉತ್ತಮ ಶಾಪಿಂಗ್‌ ನ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಸೆಪ್ಟೆಂಬರ್‌ 17ರಿಂದ 26 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಮೇಳ ಆಯೋಜಿಸಲಾಗಿದೆ.


ಕೊರೊನಾ ಲಾಕ್‌ಡೌನ್‌ ನಿಂದಾಗಿ ಮನೆಯಲ್ಲಿಯೇ ಇದ್ದು ಬೋರ್‌ ಆಗಿರುವ ಜನರ ಶಾಪಿಂಗ್‌ ಥೆರಪಿಗೆ ಬೇಕಾಗಿರುವ ಎಲ್ಲ ರೀತಿಯ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಅಲಂಕಾರಿಕ ವಸ್ತುಗಳ ಜತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ ಎಂದು ನಟಿ ಚಂದನಾ ರಾಘವೇಂದ್ರ ತಿಳಿಸಿದರು. 


ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 96118 35597

ಇತ್ತೀಚಿನ ಸುದ್ದಿ

ಜಾಹೀರಾತು