8:36 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

22/06/2026, 20:42

ಬೆಂಗಳೂರು(reporterkarnataka.com): ಕಾಂಗ್ರೆಸ್ ಸಮಾವೇಶದಿಂದ ಮೂವರು ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಗೆ ಸಮಯಕ್ಕೆ ಸರಿಯಾಗಿ ಹಾಜರಾಗಲು ಸಾಧ್ಯವಾಗಲಿಲ್ಲ ಎಂಬ ವಿಪಕ್ಷಗಳ ಆರೋಪಗಳಿಗೆ ಇಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ‘ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ನಿಜ. ನಾನು ಒಪ್ಪಿಕೊಳ್ತೀನಿ. ಜನರಿಗೆ ತೊಂದರೆಯಾಗಬಾರದು ಎಂದೇ ನಾವು ಭಾನುವಾರ ಸಮಾವೇಶವಿಟ್ಟುಕೊಂಡಿದ್ದಿದ್ದು.
ನೀಟ್ ಪರೀಕ್ಷೆಯಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಎರಡು ಮೂರು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಬರಲು ಸಾಧ್ಯವಾಗಲಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಾರ್ಯಕ್ರಮದಿಂದಾಗಿ ಯಾವುದಾದರೂ ವಿದ್ಯಾರ್ಥಿಗಳಿಗೆ ತೊಂದರೆಯಾಗಿ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗಿಲ್ಲ ಎಂದು ನಾನು ಅದರ ಬಗ್ಗೆ ವಿಷಾಧ ವ್ಯಕ್ತಪಡಿಸುತ್ತೇನೆ.
ನೀಟ್ ಪರೀಕ್ಷೆ 1.30-2.30 ಸಮಯದಲ್ಲಿ. ನಮ್ಮೆಲ್ಲಾ ಬಸ್ ಗಳೂ ಸಹಾ 10.30 ಒಳಗೆ ಪ್ಯಾಲೇಸ್ ಗ್ರೌಂಡ್ ನಲ್ಲಿ ಸೇರಿಕೊಂಡಿತ್ತು. ಎಲ್ಲೂ ಸಮಸ್ಯೆಯಾಗಬಾರದು ಎಂದು ಮೈದಾನದಲ್ಲಿನ ಎಲ್ಲಾ ಜಾಗವನ್ನು ತೆಗೆದುಕೊಂಡು ಪಾರ್ಕ್ ಮಾಡಿದ್ದೆವು. ಆದರೂ ಸಹ, ತಪ್ಪು ನಡೆದಿದೆ, ಅದರಲ್ಲೂ ಮೂರು ಮಕ್ಕಳನ್ನು ನಿರಂತರವಾಗಿ ತೋರಿಸುತ್ತಾ ಇದ್ದಾರೆ. ಅವರಿಗೇನಾದರೂ ತೊಂದರೆಯಾಗಿದ್ದರೆ ಅವರಿಗೆ ಮುಂದಿನ ಪರೀಕ್ಷೆ ತೆಗೆದುಕೊಳ್ಳಲು ಎಲ್ಲಾ ರೀತಿಯ ಸಹಾಯ ನಾವು ಮಾಡಲಿದ್ದೇವೆ’ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು