4:26 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ

23/06/2026, 17:36

ಮಂಗಳೂರು(reporterkarnataka.com): ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ನಟ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕುರಿತು ಮಾತನಾಡಿದ ರೋಹನ್ ಕಾರ್ಪೊರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರೋಹನ್ ಮೊಂತೇರೊ, “ಭಾರತದ ಅತ್ಯಂತ ಜನಪ್ರಿಯ ಕಲಾವಿದರಲ್ಲಿ ಒಬ್ಬರಾದ ಶಾರುಖ್ ಖಾನ್ ಅವರನ್ನು ಮಂಗಳೂರಿನ ನೆಲದಲ್ಲಿ ಸ್ವಾಗತಿಸುವ ಅವಕಾಶ ದೊರೆತಿರುವುದು ನಮಗೆ ಹೆಮ್ಮೆಯ ವಿಷಯ. ಈ ಕಾರ್ಯಕ್ರಮವು ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಕ್ಷಣವಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಗೂ ವಿಶಿಷ್ಟ ಅನುಭವವನ್ನು ನೀಡಲಿದೆ” ಎಂದು ಹೇಳಿದರು.
ಕಾರ್ಯಕ್ರಮದ ಸಿದ್ದತೆಗಳ ಕುರಿತು ಮಾಹಿತಿ ನೀಡಿದ ಸಂಸ್ಥೆಯ ನಿರ್ದೇಶಕರಾದ ಡಿಯಾನ್ ಮೊಂತೇರೊ, “ಇದು ಮಂಗಳೂರಿನಲ್ಲಿ ನಡೆಯಲಿರುವ ಅತಿದೊಡ್ಡ ಕಾರ್ಪೊರೇಟ್ ಕಾರ್ಯಕ್ರಮಗಳಲ್ಲಿ ಒಂದಾಗಲಿದೆ. ನಮ್ಮ ಸಂಸ್ಥೆಗೆ ಮತ್ತು ನಗರಕ್ಕೆ ಮಹತ್ವದ ಕ್ಷಣವಾಗಿರುವ ಈ ಕಾರ್ಯಕ್ರಮವು ಸುರಕ್ಷಿತವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ’ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದ್ದು, ಅಧಿಕೃತವಾಗಿ ನೋಂದಾಯಿತ ಪಾಸ್‌ ಹೊಂದಿರುವವರಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.
ಶಾರುಖ್ ಖಾನ್ ಅವರ ಮಂಗಳೂರು ಭೇಟಿ ಘೋಷಣೆಯಾಗುತ್ತಿದ್ದಂತೆ ಕರಾವಳಿ ಭಾಗದಲ್ಲಿ ಅಪಾರ ಕುತೂಹಲ ಮತ್ತು ನಿರೀಕ್ಷೆ ಮೂಡಿದ್ದು, ಈ ಕಾರ್ಯಕ್ರಮವು ಮಂಗಳೂರಿನ ಕಾರ್ಪೊರೇಟ್ ಹಾಗೂ ಸಾಮಾಜಿಕ ವಲಯದಲ್ಲಿ ವಿಶೇಷ ಗಮನ ಸೆಳೆಯುವ ನಿರೀಕ್ಷೆಯಿದೆ.

*ರೋಹನ್ ಕಾರ್ಪೊರೇಶನ್ ಬಗ್ಗೆ:*
ರೋಹನ್ ಕಾರ್ಪೊರೇಶನ್ ಕರಾವಳಿ ಕರ್ನಾಟಕದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾಗಿದ್ದು, ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಗ್ರಾಹಕರ ವಿಶ್ವಾಸವನ್ನು ತನ್ನ ಪ್ರಮುಖ ಮೌಲ್ಯಗಳಾಗಿ ಹೊಂದಿದೆ. ಸಂಸ್ಥೆಯು ಹಲವು ವಸತಿ ಹಾಗೂ ವಾಣಿಜ್ಯ ಯೋಜನೆಗಳ ಮೂಲಕ ತನ್ನದೇ ಆದ ಗುರುತನ್ನು ನಿರ್ಮಿಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು