4:12 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕ್ಯಾಥೋಲಿಕ್ ಸಭಾ ಮಂಗಳೂರು ಸಿಟಿ ವಲಯದ ಪದಾಧಿಕಾರಿಗಳಿಗೆ ತರಬೇತಿ ಶಿಬಿರ

25/06/2026, 13:05

ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಕ್ಯಾಥೋಲಿಕ್ ಸಭಾ ಸಿಟಿ ವಲಯದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ರವಿವಾರ ಕುಲಶೇಖರದ ಕೋರ್ಡೆಲ್ ಹಾಲ್ ನಲ್ಲಿ ನಡೆಯಿತು.
ಕ್ಯಾಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಮಾಜಿ ಅಧ್ಯಕ್ಷ ನೈಜಿಲ್ ಪಿರೇರಾ ಅವರು ತರಬೇತಿಯನ್ನು ನೀಡಿ ಪದಾಧಿಕಾರಿಗಳ ಕರ್ತವ್ಯಗಳನ್ನು ವಿವರಿಸಿದರು.
ಕ್ಯಾಥೋಲಿಕ್ ಸಭಾ ಸಿಟಿ ವಲಯದ ಆಧ್ಯಾತ್ಮಿಕ ನಿರ್ದೇಶಕ ಆಂಜೆಲೋರ್ ಗಾರ್ಡಿಯನ್ ಏಂಜೆಲ್ ಚರ್ಚಿನ ಪ್ರಧಾನ ಧರ್ಮಗುರು ವಂದನೀಯ ಫಾ. ಪೆಡ್ರಿಕ್ ಮೊಂತೇರೊ ಅವರು ಸಿಟಿ ವಲಯದ ವಿಗಾರ್ ವಾರ್ ಆಗಿ ಹೊಸತಾಗಿ ನೇಮಕಗೊಂಡ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರನ್ನು ಹೂ ಗುಚ್ಛ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಮಾತನಾಡಿ ಪ್ರತಿಯೊಂದು ಚರ್ಚ್ ನಲ್ಲಿ ಕ್ಯಾಥೋಲಿಕ್ ಸಭಾ ಘಟಕವು ತನ್ನದೇ ಬಲವನ್ನು ಹೊಂದಿದೆ. ಸಂಘಟನೆಯು ಮುಂದಿನ ದಿನಗಳಲ್ಲಿ ವಲಯ ಮಟ್ಟದಲ್ಲಿ ಇನ್ನಷ್ಟು ಬಲಯುತಗೊಳ್ಳಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಕ್ಯಾಥೋಲಿಕ್ ಸಭಾ ಸಿಟಿ ವಲಯದ ಅಧ್ಯಕ್ಷ
ಸಂತೋಷ್ ಡಿ ಕೋಸ್ತಾ, ಉಪಾಧ್ಯಕ್ಷ ರೊನಾಲ್ಡ್ ಸಲ್ದಾನ್ಹಾ, ಸಹ ಕಾರ್ಯದರ್ಶಿ ಡೆನ್ನಿಸ್ ಡಿ ಸೋಜಾ ವಾಮಂಜೂರು, ಕೋಶಾಧಿಕಾರಿ ರೊನಾಲ್ಡ್ ರೊಡ್ರಿಗಸ್ ದೇರೆಬೈಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು