12:42 AM Saturday24 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ ಉಲ್ಲಾಸ್ ಗೌಡ ಸಾವು

27/06/2026, 21:38

ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಭಾ ಮಾ ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಅಕಾಲಿಕವಾಗಿ ನಿಧನರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಕೊಡಚಾದ್ರಿ ಪ್ರದೇಶದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ವೇಳೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಉಲ್ಲಾಸ್ ಗೌಡ ಅವರು ಇತ್ತೀಚೆಗೆ ಚಂದನಾ ಗೌಡ ಅವರೊಂದಿಗೆ ನಿಶ್ಚಿತಾರ್ಥಗೊಂಡಿದ್ದರು.ಕುಟುಂಬದ ಸಮ್ಮುಖದಲ್ಲಿ ಸರಳವಾಗಿ ದೀಪದ ಶಾಸ್ತ್ರ ನೆರವೇರಿಸಲಾಗಿತ್ತು. ಈ ವರ್ಷದಲ್ಲೇ ವಿವಾಹ ನಿಗದಿಯಾಗಿತ್ತು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮದುವೆ ಸಂಭ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲೇ ಈ ದುರಂತ ಸಂಭವಿಸಿರುವುದು ಕುಟುಂಬ ಹಾಗೂ ಚಿತ್ರರಂಗದ ವಲಯದಲ್ಲಿ ಆಘಾತ ಮೂಡಿಸಿದೆ. ಭಾ ಮಾ ಹರೀಶ್ ಅವರು ಪುತ್ರನ ವಿವಾಹ ಸಂಭ್ರಮದ ನಿರೀಕ್ಷೆಯಲ್ಲಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿರುವುದು ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ.
ಟ್ರೆಕ್ಕಿಂಗ್ ಸಮಯದಲ್ಲಿ ಉಲ್ಲಾಸ್ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು,ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳು ನಿರೀಕ್ಷಿಸಲಾಗುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು