2:01 PM Tuesday24 - September 2024
ಬ್ರೇಕಿಂಗ್ ನ್ಯೂಸ್
ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ… 2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಹುಟ್ಟುಹಬ್ಬ: ಮಾಲೂರಿನಲ್ಲಿ ಬೃಹತ್‌ ರಕ್ತದಾನ ಶಿಬಿರ: 1039 ಯೂನಿಟ್‌ ರಕ್ತ ಸಂಗ್ರಹಣೆಯ ಮೂಲಕ ದಾಖಲೆ

19/09/2021, 09:17

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯ ಕುಮಾರ್‌ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್‌ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾಗಿದೆ. ರಾಜ್ಯದಲ್ಲಿ ನಡೆದ ಎಲ್ಲ ಕಾರ್ಯಕ್ರಮಗಳಲ್ಲೂ ಅತಿ ಹೆಚ್ಚು 1039 ಯುನಿಟ್‌ ರಕ್ತವನ್ನು ಸಂಗ್ರಹಿಸಿದ ಹೆಗ್ಗಳಿಕೆ ಈ ಕಾರ್ಯಕ್ರಮದ್ದಾಗಿದೆ. 

ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತ ನಿಧಿಯ ಮೂಲಕ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದು ಸಾವಿರ ಯೂನಿಟ್‌ ರಕ್ತವನ್ನು ಸಂಗ್ರಹಿಸಿ ದೇಶದಲ್ಲಿನ ರಕ್ತಹೀನ ರೋಗಿಗಳ ಪಾಲಿನ ಸಂಜೀವಿನ ಆಗುವ ನಿಟ್ಟಿನಲ್ಲಿ ತಾಲ್ಲೂಕು ಬಿಜೆಪಿ ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ ನಿಗದಿಪಡಿಸಿದ್ದ ಗುರಿಯನ್ನು ಸಾಧಿಸಿದ್ದೇವೆ. ತಾಲ್ಲೂಕಿನ ಎಲ್ಲಾ ಭಾಗಗಳಿಂದ ಆಗಮಿಸಿದ್ದ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ ಕಾರಣ ನಿಗದಿತ ಗುರಿಯನ್ನು ಸಾಧಿಸಿದ್ದೇವೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಢುವ ಮೂಲಕ ಮೋದಿ ಅವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ ಎಂದು ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯ ಕುಮಾರ್‌ ತಿಳಿಸಿದರು. 

ನಿನ್ನೆ ಬೃಹತ್‌ ರಕ್ತಧಾನ ಶಿಬಿರವನ್ನು ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಉಚಿತವಾಗಿ ಹೆಲ್ಮೇಟ್‌ ವಿತರಣೆ ಹೀಗೆ ಹತ್ತು ಹಲವು ಸಮಾಜ ಸೇವೆಯ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು. 

ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಕರಿಗೆ ಇದೇ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು