10:54 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಪ್ರಕರಣ: ಇಬ್ಬರ ಬಂಧನ; ಇನ್ನೊರ್ವ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿ

28/06/2026, 21:11

ಮಂಗಳೂರು(reporterkarnataka.com): ವೃದ್ದ ಮಹಿಳೆಯ ಕುತ್ತಿಗೆಯಿಂದ ಬಂಗಾರದ ಸರ ಕಸಿದುಕೊಂಡ ಪ್ರಕರಣ ಭೇದಿಸಿದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳ ಬಂಧಿಸಿದ್ದಾರೆ, ಇನೋರ್ವ ಆರೋಪಿ ಪರಾರಿಯಾಗಿದ್ದಾನೆ.
ಜೂನ್ 14ರಂದು ಮಧ್ಯಾಹ್ನ ಸುಮಾರು 12.30 ಗಂಟೆಗೆ, ಮಂಗಳೂರು ನಗರದ ಸೂಟರ್ ಪೇಟೆಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಎಕ್ಕೂರು ಬಸ್ ನಿಲ್ದಾಣದಿಂದ ಇಳಿದು ಸೂಟರ್ ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ, ಇಬ್ಬರು ಅಪರಿಚಿತರು ಮೋಟಾರು ಸೈಕಲ್ ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಏಕಾಏಕಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 12 ಗ್ರಾಂ ತೂಕದ ಲಕ್ಷ್ಮಿ ಪೆಂಡೆಂಟ್ ಹೊಂದಿರುವ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್ ಸೈಕಲ್ ನಲ್ಲಿ ಪರಾರಿಯಾಗಿದ್ದರು. ಚಿನ್ನದ ಸರದ ಅಂದಾಜು ಮೌಲ್ಯ ಸುಮಾರು ₹1,50,000/- ಆಗಿರುತ್ತದೆ.
ಪ್ರಕರಣ ಸಂಬಂಧಿಸಿದಂತೆ ಜೂನ್ 26ರಂದು ಬೆಳಿಗ್ಗೆ ಮಂಗಳೂರು ನಗರದ ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಸೇರಿಕೊಂಡು ಸರಕಳವು ಮಾಡಿಕೊಂಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾರೆ.
ಆರೋಪಿಗಳಾದ ಅಲ್ತಾಫ್ ಹುಸೈನ್ (ಬಾಗಲಕೋಟೆ ನಿವಾಸಿ), ಮೊಹಮ್ಮದ್ ಸಾಹಿಲ್ @ ಸಿದ್ದೀಖಿ (ಉತ್ತರ ಪ್ರದೇಶ ನಿವಾಸಿ) ಹಾಗೂ ರವಿ ಬೌರಾ (ಉತ್ತರ ಪ್ರದೇಶ ನಿವಾಸಿ) ಎಂಬವರನ್ನು ನ್ನು ಠಾಣೆಗೆ ಕರೆದುಕೊಂಡು ಬರುತ್ತಿದ್ದ ವೇಳೆ, ಆರೋಪಿ ಅಲ್ತಾಫ್ ಹುಸೈನ್ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಅವರನ್ನು ತಳ್ಳಿ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಯಾದ ವಿನಾಯಕ ರವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ.
ಆರೋಪಿಯಾದ ಅಲ್ತಾಫ್ ಹುಸೈನ್ ರವರನ್ನು ಪತ್ತೆ ಹಚ್ಚಲು ತಂಡವನ್ನು ರಚಿಸಿ ಶೋಧನಾ ಕಾರ್ಯವನ್ನು ಮುಂದುವರೆಸಲಾಗಿದೆ.
ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು