11:22 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಪುತ್ತೂರಿನ ಮುಂಡೂರು ಬಾರಿಕೆಯಲ್ಲಿ ‘ಕುಲೆತ ಮದಿಮೆ’ | ಪ್ರೇತಾತ್ಮಗಳಿಗೆ ಕಂಕಣ ಭಾಗ್ಯ; ಆನಂದ-ಸರೋಜಾ ಆತ್ಮಗಳಿಗೆ ಮದುವೆ

29/06/2026, 17:38

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಬಾರಿಕೆ ಎಂಬಲ್ಲಿ ಇತ್ತೀಚೆಗೆ ಅಪರೂಪದ ‘ಪ್ರೇತ ವಿವಾಹ’ ನಡೆಯಿತು. ಈ ಹಿಂದೆ ಮೃತಪಟ್ಟ ಆನಂದ ಮತ್ತು ಸರೋಜಾ ಎಂಬವರ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದ ದೋಷಗಳು ನಿವಾರಣೆಯಾಗಲಿ ಎಂಬ ಉದ್ದೇಶದಿಂದ ಈ ವಿವಾಹ ನಡೆಸಲಾಯಿತು.ಮೃತ ಆನಂದ ಅವರ ಕುಟುಂಬದಲ್ಲಿ ಕಳೆದ ಹಲವು ಸಮಯದಿಂದ ಸಂತಾನ ಭಾಗ್ಯದ ಕೊರತೆ, ವಿವಾಹ ತಡೆ ಸೇರಿದಂತೆ ಹಲವು ಸಮಸ್ಯೆಗಳು ಕಾಡುತ್ತಿದ್ದು, ಈ ಕುಟುಂಬದ ಕಷ್ಟಗಳಿಗೆ ಕಾರಣವೇನು ಎಂದು ಅರಿಯಲು ಜ್ಯೋತಿಷಿಗಳ ಸಲಹೆಯಂತೆ ಪ್ರಶ್ನಾ ಚಿಂತನೆ ನಡೆಸಲಾಯಿತು. ಪ್ರಶ್ನಾ ಚಿಂತನೆಯಲ್ಲಿ ಮೃತಪಟ್ಟ ಆನಂದ ಅವರಿಗೆ ವಿವಾಹವಾಗದೆ ಆ ಆತ್ಮ ಅತೃಪ್ತವಾಗಿದೆ. ಇದರಿಂದಾಗಿ ಕುಟುಂಬದಲ್ಲಿ ಇಂತಹ ಹಲವು ದೋಷಗಳು ಕಂಡು ಬರುತ್ತಿದೆ ಎಂದು ತಿಳಿದು ಬಂದಿತ್ತು. ಈ ದೋಷ ಪರಿಹರಿಸಿ, ಮೃತ ಆತ್ಮಗಳಿಗೆ ಸದ್ಗತಿ ದೊರಕಿಸಿಕೊಡಲು ಕುಟುಂಬಸ್ಥರು ಈ ವಿವಾಹಕ್ಕೆ ನಿರ್ಧರಿಸಿದರು. ಅದರಂತೆ ಆನಂದ ಕುಟುಂಬದಲ್ಲೇ ಸೋದರ ಸಂಬಂಧದಲ್ಲಿ ಮಾವನ ಮಗಳು ಸರೋಜಾ ಅವರೊಂದಿಗೆ ಆನಂದ ಅವರ ವಿವಾಹ ಮಾಡಲಾಯಿತು.

*ಧರ್ಮಪಾಲ ಶೇಣಿ ಪೌರೋಹಿತ್ಯ:*
ಪ್ರೇತ ವಿವಾಹದಲ್ಲಿ ಅನುಭವವಿರುವ ಧರ್ಮಪಾಲ ಶೇಣಿ ಅವರು ವಿವಾಹದ ಪೌರೋಹಿತ್ಯ ವಹಿಸಿದ್ದರು. ಕುಟುಂಬದ ಸದಸ್ಯರು ಮೃತ ಆನಂದ ಮತ್ತು ಸರೋಜಾ ಅವರ ಪ್ರತಿನಿಧಿಗಳಾಗಿ ಪಾಲ್ಗೊಂಡಿದ್ದರು.

*ತುಳು ನಾಡಿನ ಪ್ರೇತ ವಿವಾಹ:*
ಪ್ರೇತ ವಿವಾಹ (ಕುಲೆತ ಮದಿಮೆ)ದಲ್ಲಿ ಜೀವಂತ ವ್ಯಕ್ತಿಗಳ ಮದುವೆಯ ರೀತಿಯಲ್ಲೇ ನಡೆಯುತ್ತದೆ. ಅರಂಭದಲ್ಲಿ ಹುಡುಗಿ ನೋಡುವ ಕಾರ್ಯ, ವಿವಾಹ ನಿಶ್ವಿತಾರ್ಥ ನಡೆಯುತ್ತದೆ. ಆ ಬಳಿಕ ಮದುವೆ ಮದರಂಗಿ ನಂತರ ಮದುವೆ ನಡೆಯುತ್ತದೆ. ಮದುವೆ ದಿನ ಮದುಮಗಳಿಗೆ ಹಾಗೂ ಮದುಮಗನಿಗೆ ಹೊಸ ಬಟ್ಟೆ ತೊಡಿಸಲಾಗುತ್ತದೆ. ಆರಂಭದಲ್ಲಿ ಪೂ ಸೀರೆ (ಹೂ ಸೀರೆ ) ಬದಲಿಸುವ ಕಾರ್ಯ ಆಗುತ್ತದೆ. ನಂತರ ಎರಡು ಮಣ್ಣಿನ ಪಾತ್ರೆಗಳಿಗೆ( ತಲೆಯ ಗಾತ್ರದ್ದು) ಗಂಡು, ಹೆಣ್ಣಿನ ರೀತಿ ಕಣ್ಣು, ಬಾಯಿ ರಚಿಸಲಾಗುತ್ತದೆ.

ಈ ರೀತಿಯ ಮಾನವ ಪ್ರೇತದ ರೂಪಗಳಿಗೆ ಧಾರೆ ಎರೆಯುವಲ್ಲಿಂದ ಹಿಡಿದು ಮಾಂಗಲ್ಯ ಧಾರಣೆ ನಡೆಯುತ್ತವೆ. ಕೊನೆಗೆ ಈ ಬೊಂಬೆಗಳನ್ನು ಮನೆಯೊಳಕ್ಕೆ ಕೊಂಡೊಯ್ದು ಕೆಲವೊಂದು ಕಟ್ಟು ಕಟ್ಟಳೆಗಳು ನಡೆಯುತ್ತದೆ. ಆ ಬಳಿಕ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು