10:40 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕೇಂದ್ರದ ಮುಂದಿದೆ 2 ರೈಲು ಮಾರ್ಗ ಪ್ರಸ್ತಾವನೆ: ಶಾಸಕ ಸುನಿಲ್ ಕುಮಾರ್

29/06/2026, 20:22

ಕಾರ್ಕಳ(reporterkarnataka.com): ಉಡುಪಿ- ಕಾರ್ಕಳ- ಧರ್ಮಸ್ಥಳ- ಸಕಲೇಶಪುರ ಹಾಗೂ ಶಿವಮೊಗ್ಗ ಸಂಪರ್ಕಿಸುವ 2 ಹೊಸ ರೈಲು ಮಾರ್ಗದ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದೆ. ಅರಣ್ಯ ಇಲಾಖೆ ಅನುಮತಿ ಹಾಗೂ ಜಾಗದ ಸಮತೋಲನ ನೋಡಿಕೊಂಡು ತಜ್ಞರು ವರದಿ ರಚಿಸಿ, ಯೋಜನೆ ಮುಂದಾಗುವ ಸಾಧ್ಯತೆಯಿದೆ ಎಂದು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು.
ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಶಾಸಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಕಾರ್ಕಳ ತಾಲೂಕಿನಲ್ಲಿ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಅಮೃತ್ ಯೋಜನೆಯಡಿ ಕಾರ್ಕಳ ಪುರಸಭೆಗೆ 125 ಕೋಟಿ ರೂ. ವೆಚ್ಚದಲ್ಲಿ ನೀರಿನ ಪೈಪ್‌ಲೈನ್ ಕಾಮಗಾರಿ ನಡೆದಿದೆ. ಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿಗೆ ಐದೂವರೆ ಕೋಟಿ ರೂ. ಮೀಸಲಿರಿಸಲಾಗಿದೆ. ಮಳೆಗಾಲ ಮುಗಿದ ಕೂಡಲೇ ರಸ್ತೆ ಕಾಮಗಾರಿ ಆರಂಭವಾಗಲಿದೆ ಎಂದರು.
ಕಾಂಗ್ರೆಸ್ ಸರ್ಕಾರಕ್ಕೆ ಪ್ರಾಧಿಕಾರದ ಸಮಸ್ಯೆಯನ್ನು ಬಗೆಹರಿಸುವ ಇಚ್ಛಾಶಕ್ತಿಯಿಲ್ಲ. ಮೂರು ವರ್ಷಗಳಿಂದ ಸರ್ಕಾರ ಅಧಿಕಾರದಲ್ಲಿದ್ದರೂ ಸಮಸ್ಯೆ ಬಗೆಹರಿಸಿಲ್ಲ. ಇನ್ನು ಅಕ್ರಮ- ಸಕ್ರಮ ಹಾಗೂ ವಿವಿಧ ಭೂ ಅರ್ಜಿಗಳ ಕುರಿತು ಸರ್ಕಾರ ನೇಮಿಸಿರುವ ಸಮಿತಿ ಅಧಿಕಾರವನ್ನು ಮೊಟಕುಗೊಳಿಸಿರುವುದರಿಂದ ಸಾವಿರಾರು ಅರ್ಜಿಗಳು ವಿಲೇವಾರಿಯಾಗದೆ ಉಳಿದಿವೆ ಎಂದು ಆರೋಪಿಸಿದರು.

*ಜವಳಿ ಪಾರ್ಕ್ ನನೆಗುದಿಗೆ:*
ಬಜೆಟ್‌ನಲ್ಲಿ ಶಿಗ್ಗಾವಿ ಹಾಗೂ ಕಾರ್ಕಳಕ್ಕೆ ಜವಳಿ ಪಾರ್ಕ್ ಮಂಜೂರು ಮಾಡಲಾಗಿತ್ತು. ಡೀಮ್ಡ್ ಸಮಸ್ಯೆ ನಿವಾರಿಸಿ ನಿಟ್ಟೆಯಲ್ಲಿ ಜಾಗ ಗುರುತಿಸಲಾಯಿತು. ಆ ಬಳಿಕ ಬಂದ ಹೊಸ ಸರ್ಕಾರ ಸರ್ಕಾರ ಮೂಲಸೌಕರ್ಯ ಕಲ್ಪಿಸಿಕೊಡಲು ಪಿಪಿಪಿ ಮಾದರಿಯಲ್ಲಿ ಜಾರಿಗೆ ತರಬೇಕು ಎಂದು ಸಲಹೆ ನೀಡಿದರು. ಮೂರು ಬಾರಿ ಟೆಂಡರ್ ಕರೆದರೂ ಪ್ರಯೋಜನವಾಗಿಲ್ಲ ಎಂದು ಸುನೀಲ್ ತಿಳಿಸಿದರು.

*ಥೀಮ್ ಪಾರ್ಕ್ ಚುನಾವಣೆ ಗಿಮಿಕ್:*
ಪರಶುರಾಮ ಥೀಮ್ ಪಾರ್ಕ್‌ನ ಇಂದಿನ ಈ ಸ್ಥಿತಿಗೆ ನೇರವಾಗಿ ಮುನಿಯಾಲು ಉದಯ ಕುವಾರ್ ಶೆಟ್ಟಿ ಕಾರಣ. ಪರಶುರಾಮ ಥೀಮ್ ಪಾರ್ಕ್ ನಮಗೆ ಪ್ರವಾಸೋದ್ಯಮ ವಸ್ತು, ಬಿಜೆಪಿಗೆ ಅದು ಚುನಾವಣಾ ವಸ್ತುವಲ್ಲ. ಕಾಂಗ್ರೆಸ್ಸಿಗೆ ಅದು ಚುನಾವಣಾ ವಸ್ತುವಾಗಿದೆ ಎಂದು ಶಾಸಕ ಸುನೀಲ್ ಕುಮಾರ್ ತಿಳಿಸಿದರು.
ಮೊದಲು ಹೆಸರು ಬದಲಾವಣೆ ಹುನ್ನಾರ ಆಯಿತು. ಇದೀಗ ಕಾರ್ಕಳದ ಯಕ್ಷಾ ರಂಗಾಯಣವನ್ನು ಜಿಲ್ಲಾ ಕೇಂದ್ರಕ್ಕೆ ತೆಗೆದುಕೊಂಡು ಹೋಗುವ ಹುನ್ನಾರ ನಡೆಯುತ್ತಿದೆ. ನಮಗೆ ಯಕ್ಷಾ ರಂಗಾಯಣ ಬೇಕು. ಹಿಂದೆ ಕರಾವಳಿ ರಂಗಾಯಣ ಇತ್ತು ಎನ್ನುವುದಕ್ಕೆ ಒಂದು ಪುರಾವೆ ಕೊಡಲಿ. ಕರಾವಳಿ ಪ್ರಾದೇಶಿಕತೆಯ ಅಸ್ಮಿತೆ ಯಕ್ಷಗಾನ ಎಂದು ಅವರು ನುಡಿದರು.
ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಹರೀಶ್ ಸಚ್ಚೇರಿಪೇಟೆ, ಕೋಶಾಧಿಕಾರಿ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು