5:15 PM Wednesday1 - July 2026
ಬ್ರೇಕಿಂಗ್ ನ್ಯೂಸ್
ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ…

ಇತ್ತೀಚಿನ ಸುದ್ದಿ

ನಂದಿ ಬೆಟ್ಟದ ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು: ಪ್ರಜ್ಞಾಹೀನ ಸ್ಥಿತಿಯಲ್ಲಿ ಪ್ರಿಯಕರ ಪತ್ತೆ; ಪ್ರಿಯತಮನಿಂದಲೇ ಹತ್ಯೆ?

30/06/2026, 11:58

ಬೆಂಗಳೂರು(reporterkarnataka.com):;ಚಿಕ್ಕಬಳ್ಳಾಪುರದ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟದ ಬಳಿಯ ಹೋಂ ಸ್ಟೇವೊಂದರಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. ಸುರಭಿ ಎಂದು ಆಕೆಯನ್ನು ಗುರುತಿಸಲಾಗಿದ್ದು, ಆಕೆಯ ಪ್ರೇಮಿ ಸಂಜಿತ್​​​ ಅಲಿಯಿಂದ ಕೊಲೆಯಾಗಿದ್ದಾಳೆ ಎನ್ನುವ ಶಂಕೆ ವ್ಯಕ್ತವಾಗಿದೆ.ಸದ್ಯ ಶಂಕಿತ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.


ಸಾಯಿ ಸುರಭಿ ಬೆಂಗಳೂರಿನಾಕೆ. ಕೇರಳದ ಕೋಝಿಕ್ಕೋಡ್ ನಿವಾಸಿ ಸಂಜಿತ್​​​ ಅಲಿ ಕ್ಯಾಬ್​​​ ಡ್ರೈವರ್​ ಆಗಿ ಜೀವನ ಕಟ್ಟಿಕೊಂಡಿದ್ದ. ಇಬ್ಬರು ಶನಿವಾರ ಹೋಂ ಸ್ಟೇನಲ್ಲಿ ತಂಗಿದ್ದರು. ಸೋಮವಾರ ಚೆಕ್​ಔಟ್​ ಆಗಬೇಕಿತ್ತು. ಎಷ್ಟೇ ಸಮಯ ಕಳೆದರೂ ಹೊರಬರದ ಕಾರಣ ಸಿಬ್ಬಂದಿ ಒಳಗೆ ನುಸುಳಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸಾಯಿ ಸುರಭಿ ದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು. ರೂಂನಲ್ಲಿ ಮಾತ್ರೆಗಳು ಪತ್ತೆಯಾಗಿದ್ದ ಕಾರಣ, ಇಬ್ಬರು ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ ಪರ್ಸನಲ್​ ಡೈರಿ ಸಿಕ್ಕಿದ್ದು, ಅದರಲ್ಲಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಇದೇ ಹೊತ್ತಿನಲ್ಲಿ ಮೃತ ಯುವತಿಯ ತಾಯಿ ಗೀತಾ ಮಾಧ್ಯಮಗಳ ಮುಂದೆ ಮಾತನಾಡಿದ್ದು, ಇದೊಂದು ಲವ್​ ಜಿಹಾದ್​ ಕೊಲೆ, ಮಗಳನ್ನು ಡ್ರಗ್​ ಅಡಿಕ್ಟ್​ ಮಾಡಿ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ.
ಯುವತಿ ತಾಯಿ ಹೇಳಿದ್ದಿಷ್ಟು ನನ್ನ ಮಗಳು ದಯಾನಂದ ಸಾಗರ ಕಾಲೇಜಿನಲ್ಲಿ ಓದುತ್ತಿದ್ದಳು. ಆಗ ಆಕೆಗೆ ಆತ ಸ್ನೇಹಿತರ ಮುಖೇನ ಪರಿಚಯವಾಗಿದ್ದ. ಪ್ರೀತಿಸು ಎಂದು ಪೀಡಿಸುತ್ತಿದ್ದ ಈ ಬಗ್ಗೆ ನಾನು ಬನಶಂಕರಿ ಹಾಗೂ ಕುಮಾರಸ್ವಾಮಿ ಲೇಔಟ್​ ಪೊಲೀಸ್​ ಠಾಣೆಯಲ್ಲಿ ದೂರು ಕೊಟ್ಟಿದ್ದೆ. ಆಕೆ ಡ್ರಗ್​ ಅಡಿಕ್ಟ್​ ಆಗುವಂತೆ ಮಾಡಿದ್ದ ಒಮ್ಮೆ ನಾನು ಚಿಕಿತ್ಸೆ ಕೊಡಿಸಿದ್ದೆ ಸರಿಯಾಗಿದ್ದಳು. ಮುದ್ದೇನ ಹಳ್ಳಿಯಲ್ಲಿ ಕೆಲಸ ಮಾಡುತ್ತಿದ್ದಳು. ಶನಿವಾರ ಸತ್ಸಂಗ ಇದೆ ಎಂದಿದ್ದಳು. ಆತ ನನ್ನ ಮಗಳನ್ನು ಪದೇ ಪದೆ ಹುಡುಕಿ ಬರುತ್ತಿದ್ದ ಎಂದು ಸುರಭಿ ತಾಯಿ ಟಿ.ಆರ್.ಗೀತಾ ದೂರಿದ್ದಾರೆ

*ಪೊಲೀಸರು ಹೇಳಿದ್ದೇನು?*
ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಮಾತನಾಡಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರೆಸಿದ್ದೇವೆ, ಸಂಜಿತ್​ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ. ಸಂಪೂರ್ಣ ಚೇತರಿಸಿಕೊಂಡ ನಂತರ ಘಟನೆ ನಡೆದ ದಿನ ಏನಾಗಿತ್ತು ಎನ್ನುವುದು ಬೆಳಕಿಗೆ ಬರಲಿದೆ. ಮರಣೋತ್ತರ ಪರೀಕ್ಷೆಗಾಗಿ ಯುವತಿ ಮೃತದೇಹವನ್ನು ರವಾನಿಸಲಾಗಿದೆ. ವರದಿ ಬಂದ ನಂತರ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು