12:07 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಅಧಿಕಾರಿಗಳ ಬಿಲ್ಡಪ್ಗೆ ಮುಖ್ಯಮಂತ್ರಿ ಬ್ರೇಕ್: ಮಾಧ್ಯಮಗಳಲ್ಲಿ ವೈಯಕ್ತಿಕ ಪ್ರಚಾರಕ್ಕೆ ರಾಜ್ಯ ಸರಕಾರ ನಿಷೇಧ

19/09/2021, 09:53

ಬೆಂಗಳೂರು(reporterkarnataka.com): ಪ್ರಚಾರಪ್ರಿಯ ಸರಕಾರಿ ಅಧಿಕಾರಿಗಳಿಗೆ ರಾಜ್ಯ ಸರಕಾರ ಸಣ್ಣ ಶಾಕ್ ನೀಡಿದೆ. ಪತ್ರಿಕೆ, ಟಿವಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಸರಕಾರಿ ಅಧಿಕಾರಿಗಳು ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ, ಪತ್ರಿಕಾಗೋಷ್ಠಿ/ಪತ್ರಿಕಾ ಪ್ರಕಟಣೆ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು, ಕುಂದು ಕೊರತೆಗಳನ್ನು ವ್ಯಕ್ತಪಡಿಸಲು ಮಾಧ್ಯಮಗಳನ್ನು ಬಳಸುವುದಕ್ಕೆ ನಿಷೇಧ ಹೇರಲಾಗಿದೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಇಲಾಖೆಯ/ಸರ್ಕಾರದ ಸಾಧನೆಗಳನ್ನು, ವೈಯಕ್ತಿಕ ಸಾಧನೆಗಳೆಂಬಂತೆ ಪ್ರದರ್ಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದ್ದು. ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪ್ರಸಾರ ಮಾಡಬೇಕಾದ ಸಂದರ್ಭದಲ್ಲಿ, ಸರ್ಕಾರದ/ಆಡಳಿತದ ಹೆಸರಿನಲ್ಲಿ ತೆರೆಯಲಾದ ಖಾತೆಗಳನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ತಮ್ಮ ಅಧಿಕೃತ ಸರಕಾರದ ಹೆಸರಿನ ಸಾಮಾಜಿಕ ಮಾಧ್ಯಮಗಳನ್ನು ಬಳಸಬೇಕೆಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು