6:44 PM Tuesday30 - June 2026
ಬ್ರೇಕಿಂಗ್ ನ್ಯೂಸ್
Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;…

ಇತ್ತೀಚಿನ ಸುದ್ದಿ

ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

30/06/2026, 18:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಜನಾಂದೋಲನ ಹಿಂದೂ ಸಂಘಟನೆ ವತಿಯಿಂದ ಇಂದು, ಮಂಗಳವಾರ ಕರೆ ನೀಡಲಾಗಿದ್ದ ಸ್ವಯಂಪ್ರೇರಿತ ಬಂದ್‌ಗೆ ಕುಶಾಲನಗರ ಪಟ್ಟಣದ ವರ್ತಕರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಹಕರಿಸಿದರು.


ಮತಾಂತರ ಆರೋಪ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಖಂಡಿಸಿ ನಡೆಯುತ್ತಿರುವ ಬೃಹತ್ ಜಾಗೃತಿ ಜಾಥಾ ಹಾಗೂ ಪ್ರತಿಭಟನೆಗೆ ನೈತಿಕ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ವರ್ತಕ ಸಂಘ ಸ್ವಯಂಪ್ರೇರಣೆಯಿಂದ ಬಂದ್‌ಗೆ ಕರೆ ನೀಡಿತ್ತು.

*ಸಂಪೂರ್ಣ ಸ್ತಬ್ಧಗೊಂಡ ವ್ಯಾಪಾರ:* ಪಟ್ಟಣದ ಮುಖ್ಯರಸ್ತೆ, , ಐ.ಬಿ.ಸರ್ಕಲ್, ಬಸ್ ನಿಲ್ದಾಣ ರಸ್ತೆ, ಎನ್‌.ಟಿ.ಸಿ ವಾಣಿಜ್ಯ ಸಂಕೀರ್ಣ ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದವು. ಹೋಟೆಲ್, ದಿನಸಿ ಅಂಗಡಿ, ಬಟ್ಟೆ ಅಂಗಡಿ, ಜ್ಯುವೆಲ್ಲರಿ, ವಾಹನ ಶೋರೂಂಗಳು ಸಂಪೂರ್ಣ ಮುಚ್ಚಿದ್ದವು.

*ಶಾಂತಿಯುತ ಬಂದ್:* ಇದು ಯಾವುದೇ ಬಲವಂತದ ಬಂದ್ ಆಗಿರಲಿಲ್ಲ. ಸಮುದಾಯದ ಹಿತದೃಷ್ಟಿಯಿಂದ ವರ್ತಕರೆಲ್ಲರೂ ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿ ಜಾಥಾಗೆ ಬೆಂಬಲ ಸೂಚಿಸಿದರು. ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಶಾಪ್, ಹಾಲಿನ ಬೂತ್‌ಗಳು ಮಾತ್ರ ಎಂದಿನಂತೆ ಕಾರ್ಯನಿರ್ವಹಿಸಿದವು. *ಜನಜಾಗೃತಿ ಜಾಥಾ* ಜನಾಂದೋಲನ ಹಿಂದೂ ಸಂಘಟನೆ ನೇತೃತ್ವದಲ್ಲಿ ಕಾವೇರಿ ನಿಸರ್ಗಧಾಮದಿಂದ ಬೃಹತ್ ಜಾಗೃತಿ ಜಾಥಾ ಮೆರವಣಿಗೆ ನಡೆಸಲಾಯಿತು. ಹಿಂದೂ ಜಾಗರಣ ವೇದಿಕೆ, ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ 20ಕ್ಕೂ ಹೆಚ್ಚು ಹಿಂದೂ ಪರ ಸಂಘಟನೆಗಳು, ಮಹಿಳೆಯರು, ಯುವಕರು ಜಾಥಾ ದಲ್ಲಿ ಪಾಲ್ಗೊಂಡರು.

*ವರ್ತಕರ ಹೇಳಿಕೆ:* “ಧಾರ್ಮಿಕ ಅಸ್ಮಿತೆ ಉಳಿಸುವ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ಆದ್ದರಿಂದ ಇಂದು ಸ್ವಯಂಪ್ರೇರಣೆಯಿಂದ ವ್ಯಾಪಾರ ಬಂದ್ ಮಾಡಿದ್ದೇವೆ” ಎಂದು ವರ್ತಕರ ಸಂಘದ ಪ್ರಮುಖರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು