9:28 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ ಹಣ ವಸೂಲಿ ಮಾಡ್ತಿದ್ದ ಖದೀಮ ಲಾಕ್

30/06/2026, 21:02

ಬೆಂಗಳೂರು(reporterkarnataka.com): ಸಿಲಿಕಾನ್ ಸಿಟಿಯ ಹೆಚ್‌ಎಸ್‌ಆರ್ ಲೇಔಟ್ (HSR Layout) ವ್ಯಾಪ್ತಿಯಲ್ಲಿ ಸಾರ್ವಜನಿಕರನ್ನು ಬೆಚ್ಚಿಬೀಳಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ ಅಸಲಿ ಪೊಲೀಸರಿಗೇ ಶಾಕ್ ಕೊಡುವಂತೆ ಖಾಕಿ ಯೂನಿಫಾರ್ಮ್ ಧರಿಸಿ, ರಸ್ತೆಯಲ್ಲಿ ಹೋಗುವ ಬೈಕ್ ಸವಾರರನ್ನು ತಡೆದು ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್‌ನ ಕರಾಳ ಮುಖ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಬಯಲಾಗಿದೆ.

ಖಾಕಿ ಬಟ್ಟೆ ಧರಿಸಿ, ಕೈಯಲ್ಲೊಂದು ಮೊಬೈಲ್ ಹಿಡಿದು ನಿರಪರಾಧಿ ವಾಹನ ಸವಾರರನ್ನು ಹೆದರಿಸುತ್ತಿದ್ದ ಈ ನಕಲಿ ಅಸಾಮಿಯ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

*ಏನಿದು ಘಟನೆ? ಅಸಲಿ ಕಥೆ ಇಲ್ಲಿದೆ:*
ಪೊಲೀಸ್ ಹೆಸರಲ್ಲಿ ಸುಲಿಗೆ: ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವ್ಯಕ್ತಿಯೊಬ್ಬ ಟ್ರಾಫಿಕ್ ಪೊಲೀಸ್ ತರಹ ಯೂನಿಫಾರ್ಮ್ ಮತ್ತು ಜಾಕೆಟ್ ಧರಿಸಿ ನಿಂತಿದ್ದನು. ಅಲ್ಲಿಗೆ ಬರುವ ಪ್ರತಿಯೊಂದು ಬೈಕ್ ಹಾಗೂ ವಾಹನಗಳನ್ನು ತಡೆದು ತಪಾಸಣೆ ನಡೆಸುವ ನಾಟಕ ವಾಡುತ್ತಿದ್ದನು.

*ದಂಡದ ನೆಪದಲ್ಲಿ ಲೂಟಿ:* ವಾಹನ ಸವಾರರ ಬಳಿ ದಾಖಲೆಗಳನ್ನು ಕೇಳಿ, ಇಲ್ಲದಿದ್ದರೆ ಕೇಸ್ ದಾಖಲಿಸುವುದಾಗಿ ಹೆದರಿಸಿ ಅವರಿಂದ ಅಕ್ರಮವಾಗಿ ಹಣ ಪೀಕುತ್ತಿದ್ದ ಎನ್ನಲಾಗಿದೆ.
ಈತನ ನಡವಳಿಕೆಯ ಮೇಲೆ ಅನುಮಾನಗೊಂಡ ಸಾರ್ವಜನಿಕರು ಹಾಗೂ ವಾಹನ ಸವಾರರು ತಕ್ಷಣವೇ ಆತನನ್ನು ಪ್ರಶ್ನಿಸಿದ್ದಾರೆ. ಆತ ಅಸಲಿ ಪೊಲೀಸ್ ಅಲ್ಲ, ಬದಲಿಗೆ ಖಾಕಿ ಯೂನಿಫಾರ್ಮ್ ದುರುಪಯೋಗಪಡಿಸಿಕೊಂಡು ಹಣ ವಸೂಲಿ ಮಾಡುತ್ತಿದ್ದ ವಂಚಕ ಎಂಬುದು ಗೊತ್ತಾಗುತ್ತಿದ್ದಂತೆ ಸ್ಥಳೀಯರು ಆತನ ಕ್ಲಾಸ್ ತಗೆದುಕೊಂಡಿದ್ದಾರೆ ಮತ್ತು ವಿಡಿಯೋ ರೆಕಾರ್ಡ್ ಮಾಡಿದ್ದಾರೆ.

*ಸಾರ್ವಜನಿಕರೇ ಎಚ್ಚರ*
ಬೆಂಗಳೂರಿನಂತಹ ಮೆಟ್ರೋ ಸಿಟಿಯಲ್ಲಿ ಇಂತಹ ನಕಲಿ ಪೊಲೀಸರ ಕಾಟ ಹೆಚ್ಚಾಗುತ್ತಿದ್ದು, ವಾಹನ ಸವಾರರು ಜಾಗರೂಕರಾಗಿರಬೇಕಿದೆ. ಯಾವುದೇ ಅಧಿಕೃತ ಪೊಲೀಸ್ ಸಿಬ್ಬಂದಿ ದಂಡ ವಿಧಿಸುವಾಗ ರಶೀದಿ (Receipt) ನೀಡಬೇಕು ಅಥವಾ ಡಿಜಿಟಲ್ ಚಲನ್ ಮೂಲಕವೇ ಪ್ರಕ್ರಿಯೆ ನಡೆಸಬೇಕು. ಹೀಗೆ ರಸ್ತೆ ಬದಿಯಲ್ಲಿ ನಿಂತು ಹಣ ಕೇಳುವವರ ಬಗ್ಗೆ ಅನುಮಾನ ಬಂದರೆ ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಅಥವಾ ಪೊಲೀಸ್ ಕಂಟ್ರೋಲ್ ರೂಮ್‌ಗೆ ದೂರು ನೀಡಿ.

ಇತ್ತೀಚಿನ ಸುದ್ದಿ

ಜಾಹೀರಾತು