4:26 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬೈಕಂಪಾಡಿ ದರೋಡೆ ಪ್ರಕರಣ: ಅಪಹರಿಸಿದ ಕಾರು ಬೆಂಜನಪದವಿನಲ್ಲಿ ಪತ್ತೆ, ಚಿನ್ನಕ್ಕಾಗಿ ಸೀಟ್‌ ಹರಿದು ಶೋಧ

01/07/2026, 19:52

ಮಂಗಳೂರು(reporterkarnataka.com): ಸೋಮವಾರ ನಸುಕಿನ ವೇಳೆ ಬೈಕಂಪಾಡಿ ಬಳಿ ನಡೆದ ಚಿನ್ನಾಭರಣ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆ ಹೊಸ ತಿರುವು ಪಡೆದಿದೆ. ದುಷ್ಕರ್ಮಿಗಳು ಅಪಹರಿಸಿದ್ದ ಕಾರು ಬಂಟ್ವಾಳ ಠಾಣೆ ವ್ಯಾಪ್ತಿಯ ಬೆಂಜನಪದವಿನಲ್ಲಿ ಪತ್ತೆಯಾಗಿದೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.
ಆರೋಪಿಗಳು ಕಾರನ್ನು ತ್ಯಜಿಸಿ ಪರಾರಿಯಾಗಿದ್ದಾರೆ.

ಚಿನ್ನ ಹುಡುಕಾಟಕ್ಕೆ ಕಾರಿನ ಸೀಟ್‌ ಕವರ್‌ಗಳನ್ನು ಹರಿದು ಹಾಕಿ ದರೋಡೆಕೋರರು ಸಂಪೂರ್ಣವಾಗಿ ಶೋಧಿಸಿರುವುದು ಕಂಡುಬಂದಿದೆ. ಕಾರಿನಲ್ಲಿ ಬೆಲೆಬಾಳುವ ವಸ್ತು ಅಡಗಿಸಿಟ್ಟಿರಬಹುದು ಎಂಬ ಶಂಕೆಯಿಂದ ಸೀಟುಗಳನ್ನು ಹರಿದು ಹಾಕಿದ್ದಾರೆ ಎಂದು ಪೊಲೀಸರು ಅಂದಾಜಿಸಿದ್ದಾರೆ.

*ವ್ಯಾಪಾರಿಯ ಮೊಬೈಲ್‌ ನಾಪತ್ತೆ, ಕಾರು ಮಾತ್ರ ಪತ್ತೆ:*
ದರೋಡೆ ಕೋರರು ಅಪಹರಿಸಿದ್ದ ವ್ಯಾಪಾರಿಯ ಕಾರು ಬೆಂಜನಪದವಿನಲ್ಲಿ ಪತ್ತೆಯಾಗಿದ್ದರೂ ಕಸಿದುಕೊಂಡ ಮೊಬೈಲ್‌ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಮೊಬೈಲ್‌ ಸ್ವಿಚ್‌ ಆಫ್‌ ಆಗಿರುವುದರಿಂದ ಆರೋಪಿಗಳು ಅದನ್ನು ನಾಶಪಡಿಸಿರುವ ಅಥವಾ ದೂರ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಮೊಬೈಲ್‌ ಟವರ್‌ಡಂಪ್‌ ಆಧರಿಸಿ ಜಾಡು ಹಿಡಿಯುವ ಯತ್ನ ನಡೆಯುತ್ತಿದೆ.
3 ಕಾರು, ಹಲವು ಮಾರ್ಗಗಳು; ಟೋಲ್‌ಗ‌ಳತ್ತ ಪೊಲೀಸರ ಕಣ್ಣು ವ್ಯಾಪಾರಿಯ ಕಾರು ಬೆಂಜನಪದವಿನಲ್ಲಿ ಪತ್ತೆಯಾಗಿದ್ದು, ದರೋಡೆಕೋರರು ಬಳಸಿದ ಮೂರು ಕಾರುಗಳು ಇದೇ ಮಾರ್ಗವಾಗಿ ಬಂದು ಹೋಗಿರುವ ಸಾಧ್ಯತೆ ಇದೆ. ಇದೇ ಭಾಗದಿಂದ ಹೆದ್ದಾರಿ ಮೂಲಕ ಬೆಂಗಳೂರು, ಕೊಡಗು ಮಾರ್ಗವಾಗಿ ಕೇರಳ, ಧರ್ಮಸ್ಥಳ ಮಾರ್ಗವಾಗಿ ಚಿಕ್ಕಮಗಳೂರು, ಇಲ್ಲವೇ ತಲಪಾಡಿ ಮಾರ್ಗವಾಗಿ ಕೇರಳ ಕಡೆಗೆ ಆರೋಪಿಗಳು ಪರಾರಿಯಾಗಿರುವ ಸಾಧ್ಯತೆಯಿದೆ. ಹೀಗಾಗಿ ಆಯಾ ಭಾಗದ ಟೋಲ್‌ ಗೇಟ್‌ ಹಾಗೂ ಪ್ರಮುಖ ಜಂಕ್ಷನ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಒಳ ರಸ್ತೆಗಳನ್ನು ಬಳಸಿಕೊಂಡು ಆರೋಪಿಗಳು ತಪ್ಪಿಸಿಕೊಂಡಿದ್ದರೆ ಪೊಲೀಸರಿಗೆ ಸವಾಲಾಗಬಹುದು. ದರೋಡೆಕೋರರು ಗುರುತು ಪತ್ತೆಯಾಗದಂತೆ ದರೋಡೆ ಸಂಧರ್ಭ ಮಾಸ್ಕ್ ಹಾಕಿ ಕೊಂಡಿದ್ದು, ಇದನ್ನು ಹೋದ ಕಡೆಯೆಲ್ಲಾ ಬಳಸಿಕೊಂಡು ತಪ್ಪಿಸಿಕೊಳ್ಳಲು ಯತ್ನ ನಡೆಸಿರುವ ಸಾಧ್ಯತೆಯೂ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು