4:08 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಕುಂದಗೋಳ | ಗುಟ್ಕಾ ಉಗುಳುವ ಧಾವಂತ: ತಲೆ ಹೊರ ಹಾಕಿದ ತರುಣನ ಶಿರಚ್ಛೇದಿಸಿದ ಟಿಪ್ಪರ್ ಲಾರಿ

02/07/2026, 20:41

ತುಮಕೂರು(reporterkarnataka.com): ಚಲಿಸುವ ಬಸ್ಸಿನ ಕಿಟಕಿಯಿಂದ ಹೊರಗೆ ತಲೆಹಾಕಿದ ಪರಿಣಾಮ, ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿಯಾಗಿ ಯುವಕನೊಬ್ಬ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಹೊರವಲಯದಲ್ಲಿ ಸಂಭವಿಸಿದೆ.

ಶಿರೂರು ಗ್ರಾಮದ ಐಟಿಐ ವಿದ್ಯಾರ್ಥಿ ಫಕೀರೇಶ (17). ಹುಬ್ಬಳ್ಳಿಯಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ಸಿನ ಹಿಂಬದಿ ಸೀಟಿನಲ್ಲಿ ಫಕೀರೇಶ ಕುಳಿತಿದ್ದ. ಬಸ್ ಚಲಿಸುತ್ತಿದ್ದಾಗ ಗುಟ್ಕಾ ಉಗುಳಲು ಆತ ಕಿಟಕಿಯಿಂದ ತಲೆಯನ್ನು ಹೊರಗೆ ಹಾಕಿದ್ದಾನೆ. ಈ ವೇಳೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಯುವಕನ ತಲೆಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಯುವಕನ ಶಿರಚ್ಛೇದವಾಗಿದ್ದು, ದೇಹದಿಂದ ರುಂಡ ಬೇರ್ಪಟ್ಟು ರಸ್ತೆಗೆ ಬಿದ್ದಿದೆ. ದೇಹವು ಬಸ್ಸಿನ ಕಿಟಕಿಯಲ್ಲೇ ನೇತಾಡುತ್ತಿದ್ದ ಭೀಕರ ದೃಶ್ಯ ಸಹ ಪ್ರಯಾಣಿಕರು ಹಾಗೂ ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.ಸದ್ಯ ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು