12:49 PM Thursday29 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ಇರಾಕ್‌ನಲ್ಲಿ ಭ್ರಷ್ಟರ ಬೇಟೆ ಶುರು | ಮಹಿಳಾ ಸಂಸದೆ ಮನೆಯಲ್ಲಿ ಬೆಟ್ಟದಷ್ಟು ನಗ- ನಗದು, ಚಿನ್ನದ ಒಳ ಉಡುಪು ಪತ್ತೆ?!!

02/07/2026, 20:46

ಬಾಗ್ದಾದ್(reporterkarnataka.com): ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಇರಾಕ್ ದೇಶದ ಭ್ರಷ್ಟಾಚಾರದ ಕುರಿತಾದ ಸುದ್ದಿಯೊಂದು ಭಾರಿ ಸಂಚಲನ ಸೃಷ್ಟಿಸಿದೆ. ಅಲ್ಲಿನ ಮಹಿಳಾ ಸಂಸದರೊಬ್ಬರ ಮನೆಯಲ್ಲಿ ಬೆಟ್ಟದಷ್ಟು ನಗದು ಮತ್ತು ಬಂಗಾರ ಪತ್ತೆಯಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಕೆಲವು ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್ (ಟ್ವಿಟರ್) ಖಾತೆಗಳ ಪ್ರಕಾರ, ಇರಾಕ್ ಸಂಸದ ಹಿಂದ್ ಅಲ್-ಅಬ್ಬಾಸಿ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅವರ ಮನೆಯಲ್ಲಿ ಬರೋಬ್ಬರಿ 57 ಮಿಲಿಯನ್ ಡಾಲರ್ ನಗದು ಮತ್ತು 27 ಕಿಲೋಗ್ರಾಂಗಳಷ್ಟು ಶುದ್ಧ ಚಿನ್ನ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ ಚಿನ್ನದ ಒಳ ಉಡುಪುಗಳ ಫೋಟೋವನ್ನು ಲಗತ್ತಿಸಿ, ಇದು ಸಂಸದರ ಮನೆಯಲ್ಲಿ ಸಿಕ್ಕಿದ್ದು ಎಂದು ಜಗತ್ತಿನಾದ್ಯಂತ ಶೇರ್ ಮಾಡಲಾಗುತ್ತಿದೆ.

*ಕಾರ್ಯಾಚರಣೆಯಲ್ಲಿ ಸಿಕ್ಕಿದ್ದೇನು?:*
ಇರಾಕ್‌ನಲ್ಲಿ ಪ್ರಧಾನಿ ಅಲಿ ಅಲ್-ಜೈದಿ ಅವರ ಸರ್ಕಾರವು ಭ್ರಷ್ಟಾಚಾರದ ವಿರುದ್ಧ ಬೃಹತ್ ಬೇಟೆಯನ್ನಂತೂ ಶುರು ಮಾಡಿರುವುದು ನಿಜವಾಗಿದೆ. ಬಾಗ್ದಾದ್ ಸೇರಿದಂತೆ ಹಲವು ಕಡೆ ಮುಂಜಾನೆಯೇ ಭದ್ರತಾ ಪಡೆಗಳು ಮಿಂಚಿನ ದಾಳಿ ನಡೆಸಿವೆ. ಆದರೆ ವೈರಲ್ ಪೋಸ್ಟ್‌ನಲ್ಲಿರುವ ಹೆಸರು ಮತ್ತು ಚಿನ್ನದ ಒಳ ಉಡುಪಿನ ಕಥೆಯ ಹಿಂದೆ ಬೇರೆಯದೇ ಟ್ವಿಸ್ಟ್ ಇದೆ.
ಈ ಬೃಹತ್ ಆಪರೇಷನ್‌ನಲ್ಲಿ ಕನಿಷ್ಠ 7 ಸಂಸತ್ ಸದಸ್ಯರು ಮತ್ತು ಅನೇಕ ಉನ್ನತ ಮಟ್ಟದ ಅಧಿಕಾರಿಗಳು ಸೇರಿದಂತೆ ಬರೋಬ್ಬರಿ 47 ಶಂಕಿತರನ್ನು ಭದ್ರತಾ ಪಡೆಗಳು ಬಂಧಿಸಿವೆ. ಇವರೆಲ್ಲರ ಮೇಲೆ ಸಾರ್ವಜನಿಕ ನಿಧಿಯ ದುರುಪಯೋಗ ಮತ್ತು ಭ್ರಷ್ಟಾಚಾರದ ಗಂಭೀರ ಆರೋಪಗಳಿವೆ. ವಶಪಡಿಸಿಕೊಂಡ ಆಸ್ತಿ ಎಷ್ಟು?
ಇರಾಕಿ ಹೈ ಜುಡಿಷಿಯಲ್ ಕೌನ್ಸಿಲ್ ನೀಡಿರುವ ಮಾಹಿತಿ ಪ್ರಕಾರ, ಮಾಜಿ ಉಪ ತೈಲ ಸಚಿವರಿಗೆ ಸಂಬಂಧಿಸಿದ ತನಿಖೆಯಲ್ಲಿ ಸುಮಾರು 10 ಮಿಲಿಯನ್ ಡಾಲರ್​​ ನಗದು, 3 ಬಿಲಿಯನ್ ಇರಾಕಿ ದಿನಾರ್‌ಗಳು, ಚಿನ್ನದ ಆಭರಣಗಳು, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸುಮಾರು 40 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು