11:31 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ

ಇತ್ತೀಚಿನ ಸುದ್ದಿ

ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ ಒಂದು ಕಡೆ ಬರುವಂತೆ ತಿಳಿಸಲಾದ ಪೋಸ್ಟರ್ ವೈರಲ್..!

02/07/2026, 23:26

ರಶ್ಮಿ ಶ್ರೀಕಾಂತ್ ನಾಯಕ್ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮತ ಪರಿಷ್ಕರಣೆ ( SIR ) ವಿಚಾರದಲ್ಲಿ ಸಾರ್ವಜನಿಕರ ಜೊತೆಯಲ್ಲಿ ಅಧಿಕಾರಿಗಳು ಕಳ್ಳಾಟವಾಡುತ್ತಿದ್ದಾರ ಎಂಬ ಪ್ರಶ್ನೆ ಈಗ ಉದ್ಭವವಾಗಿದೆ. ಪ್ರತಿಯೊಂದು ಮನೆಗೆ ಭೇಟಿ ನೀಡಿ ಪಟ್ಟಿಯ ಪರಿಷ್ಕರಣೆ ಮಾಡಬೇಕಾದಂತ ಅಧಿಕಾರಿಗಳು ಬೇಜವಾಬ್ದಾರಿ ತೋರಿಸುತ್ತಿದ್ದಾರೆ ಎಂಬ ಪ್ರಶ್ನೆ ಈಗ ಮೂಡಿದೆ..
ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಹೋಗಬೇಕಾಗಿದ್ದಂತಹ ಬಿಎಲ್ ಓ ಗಳು ಹಾಗೂ ಬಿ ಎಲ್ ಎ ಗಳು ಸಾರ್ವಜನಿಕರನ್ನೇ ನ್ಯಾಯಬೆಲೆ ಅಂಗಡಿಗೆ ಬರುವಂತೆ ಹೇಳಿರುವ ಪೋಸ್ಟರ್ ಗಳು ಈಗ ವಾಟ್ಸಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿವೆ. ಗ್ರಾಮಸ್ಥರೆಲ್ಲರೂ ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ನೊಂದಿಗೆ ಗಾರ್ಡ್ರಗದ್ದೆಯ ನ್ಯಾಯಬೆಲೆ ಅಂಗಡಿಗೆ ಬರುವಂತೆ ಪೋಸ್ಟರ್ ಮಾಡಲಾಗಿದ್ದು ಇದೀಗ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಒಳಗಾಗಿದೆ.
ಚುನಾವಣಾ ಮತ ಪರಿಷ್ಕರಣೆ ವಿಚಾರದಲ್ಲಿ ಈಗಾಗಲೇ ಹಲವು ಗೊಂದಲಗಳಿಂದ ಕೂಡಿರುವ ಜನರಿಗೆ ಇಂತಹ ಪೋಸ್ಟರ್ ಮಾಡಿ ಹರಿ ಬಿಟ್ಟಿರುವುದು ಮತ್ತಷ್ಟು ಗೊಂದಲವನ್ನು ಸೃಷ್ಟಿ ಮಾಡಿದೆ.. ಕೂಡಲೇ ತೀರ್ಥಹಳ್ಳಿಯ ತಾಲೂಕು ದಂಡಾಧಿಕಾರಿಗಳು ಈ ವಿಷಯದ ಬಗ್ಗೆ ಮಾಹಿತಿ ಪಡೆದು, ಅಧಿಕಾರಿಗಳು ಮನೆ ಮನೆಗೆ ಹೋಗುವಂತೆ ಸೂಚನೆ ನೀಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು