6:15 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ ಮುಖ್ಯ ಶಿಕ್ಷಕಿ

06/07/2026, 17:59

ಅರುಣ್ ಸಿಂಗ್ ರಾಜಪುತ್ ಬೇಲೂರು ಹಾಸನ

info.reporterkarnataka@gmail.com

ಬೇಲೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಶಿಕ್ಷಕಿಯೊಬ್ಬರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ.
ಪಟ್ಟಣದ ದೇಗುಲ ರಸ್ತೆಯ ಸರ್ಕಾರಿ ಬಾಲಕರ ಮಾಧ್ಯಮಿಕ ಶಾಲೆಯ ಮುಖ್ಯಶಿಕ್ಷಕಿ ಪಾರ್ವತಿ ಅವರು ಬಿಎಲ್‌ಒ (Booth Level Officer) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತಲೆಸುತ್ತು ಬಂದು ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಬೇಲೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಧ್ಯಾಹ್ನ 20ನೇ ವಾರ್ಡಿನ ಚನ್ನೇಗೌಡರ ಬೀದಿಯಲ್ಲಿ ಮನೆ ಮನೆಗೆ ತೆರಳಿ ಮತದಾರರ ಪಟ್ಟಿ ವಿತರಿಸುತ್ತಿದ್ದ ಸಂದರ್ಭದಲ್ಲಿ ಅವರು ಅಸ್ವಸ್ಥಗೊಂಡು ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ಸ್ಥಳೀಯ ನಿವಾಸಿಗಳು ಕೂಡಲೇ ಅವರಿಗೆ ನೀರು ನೀಡಿ ಪ್ರಾಥಮಿಕ ನೆರವು ನೀಡಿದ ಬಳಿಕ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ವಿಷಯ ತಿಳಿದ ಅವರ ಪತಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯ ಶಿಕ್ಷಕಿ ಪಾರ್ವತಿ, “ನನಗೆ 60 ವರ್ಷ ವಯಸ್ಸಾಗಿದ್ದು, ಇನ್ನೇನು ಕೆಲವೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದೇನೆ. ಆರೋಗ್ಯ ಸಮಸ್ಯೆ ಇರುವುದರಿಂದ ಬಿಎಲ್‌ಒ ಕರ್ತವ್ಯದಿಂದ ನನ್ನನ್ನು ಬಿಡುಗಡೆ ಮಾಡುವಂತೆ ಮೇಲಾಧಿಕಾರಿಗಳಿಗೆ ಮನವಿ ಮಾಡಿದ್ದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನಿನ್ನೆ ನಡೆದ ತಹಸೀಲ್ದಾರ್ ಸಭೆಯಲ್ಲಿ ಭಾನುವಾರವೂ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿತ್ತು. ಇಂದು ಕೆಲಸದ ವೇಳೆ ತಲೆಸುತ್ತು ಬಂದು ಕುಸಿದು ಬಿದ್ದಿದ್ದೇನೆ. ವೈದ್ಯರು ಒಂದು ವಾರ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.
ಇದೇ ವೇಳೆ, 55 ವರ್ಷ ಮೇಲ್ಪಟ್ಟ ಸಿಬ್ಬಂದಿಯನ್ನು ಬಿಎಲ್‌ಒ ಆಗಿ ನೇಮಕ ಮಾಡಬಾರದು ಎಂಬ ನಿಯಮವಿದೆ ಎನ್ನುವ ಮಾಹಿತಿ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕೆಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು