1:02 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ

08/07/2026, 12:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ನಾಗರಹೊಳೆ ಉದ್ಯಾನದ ಬೀಟ್ ಗಾರ್ಡ್ ತನ್ನ ಮನೆಯಲ್ಲಿ ಅಕ್ರಮವಾಗಿ ಜಿಂಕೆಯನ್ನು ಇಟ್ಟುಕೊಂಡಿದ್ದನ್ನು ಬೆಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ಪತ್ತೆ ಹಚ್ಚಿ ಆತನನ್ನು ಬಂಧಿಸಿದ್ದಲ್ಲದೆ. ಆರೋಪಿಯು ಅನಧಿಕೃತವಾಗಿ ಇರಿಸಿಕೊಂಡಿದ್ದ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

ನಾಗರಹೊಳೆ ಉದ್ಯಾನವನದ ಹುಣಸೂರು ವನ್ಯಜೀವಿ ವಲಯದ ಬೀಟ್‌ಗಾರ್ಡ್ ಪೊನ್ನಪ್ಪ ಬಂಧಿತ ಆರೋಪಿ, ಈತನ ಮನೆಯಲ್ಲಿದ್ದ ಸ್ನೇಹಿತರ ಬಂದೂಕನ್ನು ಸಹ ವಶಕ್ಕೆ ಪಡೆಯಲಾಗಿದೆ.
ಆರೋಪಿ ಪೊನ್ನಪ್ಪ ಉದ್ಯಾನದಂಚಿನಲ್ಲೇ ತನ್ನ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿದ್ದು, ಅಲ್ಲಿ ಜಿಂಕೆಯನ್ನು ಸಾಕುತ್ತಿರುವ ಹಾಗೂ ಈತ ಕೆಲವರೊಂದಿಗೆ ಸೇರಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದಾನೆಂದು ಬೆಂಗಳೂರಿನ ಅರಣ್ಯ ಸಂಚಾರಿ ದಳಕ್ಕೆ ಬಂದ ಖಚಿತ ಮಾಹಿತಿ ಮೇರೆಗೆ ಸೋಮವಾರ ಪೊನ್ನಪ್ಪನ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಮನೆಯ ಕೊಟ್ಟಿಗೆಯಲ್ಲಿ ಜಿಂಕೆ ಇರುವುದು ಹಾಗೂ ಮತ್ತೊಬ್ಬರಿಗೆ ಸೇರಿದ ಬಂದೂಕು ಪತ್ತೆಯಾಗಿದೆ. ಆದರೆ ಯಾವುದೇ ಮಾಂಸ ಪತ್ತೆಯಾಗಿಲ್ಲ.
ಅಧಿಕಾರಿಗಳ ದೌಡು:
ಈ ಬಗ್ಗೆ ನಾಗರಹೊಳೆ ಹುಲಿ ಯೋಜನೆ ನಿರ್ದೇಶಕಿ ಪಿ.ಎ.ಸೀಮಾರಿಗೆ ಸಂಚಾರಿ ದಳದ ಅಧಿಕಾರಿಗಳು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಎಸಿಎಫ್ ಲಕ್ಷ್ಮೀಕಾಂತ್, ಆರ್‌ಎಫ್‌ಓ ಸುಬ್ರಮಣ್ಯರೊಂದಿಗೆ ಭೇಟಿ ಇತ್ತು ಪರಿಶೀಲಿಸಿದರು.

*ಜಿಂಕೆ ರಕ್ಷಣೆ, ಬಂದೂಕು ವಶ, ಆರೋಪಿ ಬಂಧನ:*
ಆರೋಪಿ ಬೀಟ್‌ಗಾರ್ಡ್ ಪೊನ್ನಪ್ಪ ಜಿಂಕೆಗೆ ಗಾಯವಾಗಿದ್ದರಿಂದ ಕಳೆದ ಮೂರು ತಿಂಗಳಿನಿಂದ ಚಿಕಿತ್ಸೆ ನೀಡುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾನೆ. ಗಾಯಗೊಂಡಿರುವ ಜಿಂಕೆಯನ್ನು ರಕ್ಷಿಸಿ ಕೂರ್ಗಳ್ಳಿ ವನ್ಯಜೀವಿ ಪುನರ್ ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

*ಗಾರ್ಡ್ ವಿರುದ್ದ ಕ್ರಮ:* ಇಲಾಖೆಗೆ ಯಾವುದೇ ಮಾಹಿತಿ ನೀಡದೆ ಬೀಟ್‌ಗಾರ್ಡ್ ಪೊನ್ನಪ್ಪ ಜಿಂಕೆ ಸಾಕುತ್ತಿರುವುದು, ಮನೆಯಲ್ಲಿ ಬಂದೂಕು ಹೊಂದಿರುವುದು ಅಪರಾಧವಾಗಿದೆ. ಆದರೆ ಮನೆಯಲ್ಲಿ ಯಾವುದೇ ಪ್ರಾಣಿ ಮಾಂಸ ಪತ್ತೆಯಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು